
ತ್ರಿಚಿ : ಕಾವೇರಿ ವಿವಾದ ಹಿನ್ನೆಲೆಯಲ್ಲಿ ತಮಿಳುನಾಡಿನ ತ್ರಿಚಿ ವಿಮಾನ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಅಮ್ಮಾ ಮಕ್ಕಳ್ ಮುನ್ನೇತ್ರಾ ಕಾಜ್ ಹಗಮ್ ಮುಖಂಡ ಟಿಟಿವಿ ದಿನಕರನ್ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ವಿಳಂಬ ಮಾಡದೆ ಕೇಂದ್ರಸರ್ಕಾರ ಕಾವೇರಿ ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ ರಚಿಸಬೇಕೆಂದು ಪ್ರತಿಭಟನಾಕಾರರು ಕೇಂದ್ರಸರ್ಕಾರವನ್ನು ಒತ್ತಾಯಿಸಿದರು.
ಕರ್ನಾಟಕ ಮತ್ತು ತಮಿಳುನಾಡು ನಡುವಣ ನೀರು ಹಂಚಿಕೆ ಸೂತ್ರವಾಗಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸುವಂತೆ ಕೇಂದ್ರಸರ್ಕಾರಕ್ಕೆ ಸುಪ್ರೀಂಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತ್ತು.
ತಮಿಳುನಾಡಿಗೆ ಸೇರಬೇಕಾದ ಕಾವೇರಿ ನೀರಿನ ಪಾಲಲ್ಲಿ 177.25 ಟಿಎಂಸಿ ಗೆ ಇಳಿಸಿ ದೇಶದ ಅತ್ಯುನ್ನತ ನ್ಯಾಯಾಲಯ ನಿರ್ದೇಶನ ನೀಡಿತ್ತು. ಕೇಂದ್ರಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಕಾವೇರಿ ನೀರು ನಿರ್ವಹಣಾ ಸಮಿತಿ ರಚಿಸುವಂತೆ ಮಾರ್ಚ್ 15 ರಂದು ತಮಿಳುನಾಡು ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿತ್ತು.
Advertisement