ಸೇನೆಯಿಂದ ಉಗ್ರರ ಸಂಹಾರ: ಭಾರತದ ವಿರುದ್ಧ ಯುದ್ಧಕ್ಕೆ ಉಗ್ರ ಹಫೀಜ್ ಆಗ್ರಹ
ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಗಳು ಭಾನುವಾರ 13 ಉಗ್ರರನ್ನು ಸಂಹಾರ ಮಾಡಿದ್ದಕ್ಕೆ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾನೆ...
ನವದೆಹಲಿ; ದಕ್ಷಿಣ ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆಗಳು ಭಾನುವಾರ 13 ಉಗ್ರರನ್ನು ಸಂಹಾರ ಮಾಡಿದ್ದಕ್ಕೆ, 2008ರ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ಹಫೀಜ್ ಸಯೀದ್ ತೀವ್ರವಾಗಿ ಕೆಂಡಾಮಂಡಲಗೊಂಡಿದ್ದಾನೆ.
ಉಗ್ರರ ಹತ್ಯೆಗೆ ಪ್ರತಿಕ್ರಿಯೆಯಾಗಿ ಸೋಮವಾರ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಹಫೀಜ್, ಕಾಶ್ಮೀರದಲ್ಲಿ ನಡೆದ ಘಟನೆಗೆ ಪ್ರತಿಯಾಗಿ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಘೋಷಣೆ ಮಾಡಬೇಕು ಎಂದು ಹೇಳಿದ್ದಾನೆ.
ಉಗ್ರರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭಾರತದ ವಿರುದ್ಧ ಯುದ್ಧ ಸಾರುತ್ತೇನೆಂದು ತಿಳಿಸಿದ್ದಾನೆ.
ಅಲ್ಲದೆ, ಪಾಕಿಸ್ತಾನ ಸರ್ಕಾರದ ವಿರುದ್ಧವೂ ತೀವ್ರವಾಗಿ ಕಿಡಿಕಾರಿರುವ ಹಫೀಜ್, ಭಾರತದಲ್ಲಿನ ಕಾಶ್ಮೀರ ಜನರ ಬಗ್ಗೆ ಪಾಕಿಸ್ತಾನ ಸರ್ಕಾರ ಕಾಳಜಿ ಹೊಂದಿಲ್ಲ ಎಂದು ಆರೋಪಿಸಿದ್ದಾರೆ.
ಈ ನಡುವೆ ಪ್ರತಿಕ್ರಿಯೆ ನೀಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶಾಹೀದ್ ಖಕ್ವಾನ್ ಅಬ್ಬಾಸಿಯವರು, ಉಗ್ರರ ಹತ್ಯೆ ಘಟನೆ ಕ್ರೂರತ್ವದ ಪ್ರತಿರೂಪ ಎಂದು ಹೇಳಿಕೊಂಡಿದ್ದಾರೆ.