ರಾಜಸ್ತಾನದಲ್ಲಿನ ದಲಿತ ಶಾಸಕರು, ಮಾಜಿ ಶಾಸಕರ ಮನೆಗೆ ಬೆಂಕಿ

ಇಲ್ಲಿನ ಕಾರೌಲಿ ಜಿಲ್ಲೆಯ ಹಿಂದಾನ್ ಪಟ್ಟಣದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಗಲಭೆಯ ವೇಳೆ ಉದ್ರಿಕ್ತ ಗುಂಪು ದಲಿತ ಶಾಸಕರು, ಮಾಜಿ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ರಿಕ್ತ ಗುಂಪು ಬೆಂಕಿ ಹಚ್ಚಿರುವ ಚಿತ್ರ
ಉದ್ರಿಕ್ತ ಗುಂಪು ಬೆಂಕಿ ಹಚ್ಚಿರುವ ಚಿತ್ರ

ರಾಜಸ್ತಾನ: ಇಲ್ಲಿನ  ಕಾರೌಲಿ ಜಿಲ್ಲೆಯ ಹಿಂದಾನ್ ಪಟ್ಟಣದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ಗಲಭೆಯ ವೇಳೆ ಉದ್ರಿಕ್ತ ಗುಂಪು ದಲಿತ ಶಾಸಕರು, ಮಾಜಿ ಶಾಸಕರ ಮನೆಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಸುಮಾರು 5 ಸಾವಿರಕ್ಕೂ ಹೆಚ್ಚು ಉದ್ರಿಕ್ತ ಗುಂಪೊಂದು ಹಾಲಿ ಶಾಸಕ ರಾಜಕುಮಾರ್ ಜಾಠವ್  ಮತ್ತು ಕಾಂಗ್ರೆಸ್ಸಿನ ಮಾಜಿ ಶಾಸಕ ಬಾರೊಸಿಲಾಲ್ ಜಠಾವ್ ಅವರ ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ ಎಂದು ಜಿಲ್ಲಾಧಿಕಾರಿ ಕಾರೌಲಿ ಅಭಿಮನ್ಯು ಕುಮಾರ್ ತಿಳಿಸಿದ್ದಾರೆ.

 ವಿವಿಧ ದಲಿತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಮಾರನೇ ದಿನವಾದ ಇಂದು  ಈ ಘಟನೆ ನಡೆದಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಳಗ್ಗೆಯಿಂದ ಉದ್ರಿಕ್ತ ವಾತಾವರಣ ಉಂಟಾಗಿದ್ದು, ಶಾಸಕರು , ಮಾಜಿ ಶಾಸಕರ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಬೆಂಕಿ ಹಚ್ಚಲಾಗಿದೆ. ನಾಳೆಯವರೆಗೂ ನಿಷೇಧಾಜ್ಞೆ ಮುಂದುವರೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com