ಸಿಬಿಎಸ್ಇ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: 10ನೇ ತರಗತಿ ಗಣಿತ ಮರುಪರೀಕ್ಷೆ ಇಲ್ಲ, ನಿಟ್ಟುಸಿರು ಬಿಟ್ಟ ವಿದ್ಯಾರ್ಥಿಗಳು

ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಸಿಬಿಎಸ್ಇ 10ನೇ ತರಗತಿ ಗಣಿತ ವಿಷಯದ ಮರು ಪರೀಕ್ಷೆ ನಡೆಸುವುದಿಲ್ಲ ಎಂದು ಸಿಬಿಎಸ್ಇ ಮಂಗಳವಾರ ಸ್ಪಷ್ಟಪಡಿಸಿದೆ. 
ಈ ಕುರಿತಂತೆ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಅನಿಲ್ ಸ್ವರೂಪ್ ಅವರು ಟ್ವಿಟರ್ ಮೂಲಕ ಸ್ಪಷ್ಟಪಡಿಸಿದ್ದು, ಸಿಬಿಎಸ್ಇ 10ನೇ ತರಗತಿ ಮರು ಪರೀಕ್ಷೆ ಇಲ್ಲ ಎಂದು ಹೇಳಿದ್ದಾರೆ. 
ಪರೀಕ್ಷೆಗಿಂತ ಕೆಲ ಗಂಟೆಗಳ ಹಿಂದೆ ಪ್ರಶ್ನೆಪತ್ರಿಕೆ ಸೋರಿಯಾಗಿದ್ದ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆಸಲಾಗಿತ್ತು. ಇದೀಗ ಸಿಬಿಎಸ್ಇ 10ನೇ ತರಗತಿ ಮರುಪರೀಕ್ಷೆ ನಡೆಸಿದಿರಲು ತೀರ್ಮಾನ ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ಪರಿಗಣಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಮಾರ್ಚ್ 28 ರಂದು ಸಿಬಿಎಸ್ಇ 10ನೇ ತರಗತಿಯ ಗಣಿತ ಪರೀಕ್ಷೆ ನಡೆದಿತ್ತು. ದೆಹಲಿ ಎನ್'ಸಿಆರ್ ಮತ್ತು ಹರಿಯಾಣ ರಾಜ್ಯದಲ್ಲಿ ಪರೀಕ್ಷೆಗೂ 1 ಗಂಟೆ ಮುಂಚೆ ಪ್ರಶ್ನೆ ಪತ್ರಿಕೆ ಸೋರಿಯಾಗಿತ್ತು. ಈ ಹಿನ್ನಲೆಯಲ್ಲಿ ಮರುಪರೀಕ್ಷೆ ನಡೆಸಲು ಸಿಬಿಎಸ್ಇ ಈ ಹಿಂದೆ ನಿರ್ಧರಿಸಿತ್ತು. 
ನಂತರ ಉತ್ತರ ಪತ್ರಿಕೆಗಳ ಆಳವಾದ ವೀಕ್ಷಣೆ ಮತ್ತು ಮೌಲ್ಯಮಾಪನದ ಬಳಿಕ ಪ್ರಶ್ನೆಪತ್ರಿಕೆ ಸೋರಿಕೆಯಿಂದ ನಿರ್ದಿಷ್ಟ ಪರಿಣಾಮವಾಗಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಹೀಗಾಗಿ ಮರುಪರೀಕ್ಷೆ ನಡೆಸದರಿಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com