ಎಸ್ ಸಿ ಎಸ್ ಟಿ ಕಾಯ್ದೆ ತೀರ್ಪು ಮರುಪರಿಶೀಲನೆಗೆ ಅರ್ಜಿ: ಸುಪ್ರೀಂ ನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಮುಖ ಕಾರಣಗಳು

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಕೇಂದ್ರ ಸರ್ಕಾರ ಏ.02 ರಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಕೇಂದ್ರ ಸರ್ಕಾರ ಏ.02 ರಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ. 
ಮಾ.20 ರ ತೀರ್ಪಿನಿಂದಾಗಿ ದೌರ್ಜನ್ಯ ಪ್ರಕರಣಗಳು ದಾಖಲಾಗುವುದು ವಿಳಂಬವಾಗುತ್ತದೆ, ಇದರಿಂದ ಕಾನೂನಿನ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಮಾ.20 ರಂದು ನೀಡಿರುವ ತೀರ್ಪಿನಿಂದಾಗಿ 1989 ರ ಕಾನೂನು ದುರ್ಬಲಗೊಳ್ಳುವ ಸಾಧ್ಯತೆ ಇದ್ದು,ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಹೇಳಿದೆ. 
ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧ ನಡೆದಿರುವ ದೌರ್ಜನ್ಯ, ಹಲ್ಲೆಗಳು ಅಮಾನವೀಯ ಘಟನೆಗಳ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಕಠಿಣ ಕಾನೂನಿದ್ದರೂ ಈ ರೀತಿಯ ಅಪರಾಧಗಳು ಕಡಿಮೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಬೇಕೆಂದು ಹೇಳಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com