ಐಎನ್ ಎಕ್ಸ್ ಮೀಡಿಯಾ ಪ್ರಕರಣ: ಕಾರ್ತಿ ಚಿದಂಬರಂ ಸಿಎಗೆ ಜಾಮೀನು

ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ....
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರಿಗೆ ಸಿಬಿಐ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ಭಾಸ್ಕರರಾಮನ್ ಅವರು ಮಾರ್ಚ್ 26ರಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಸಿಬಿಐ ವಿಶೇಷ ಕೋರ್ಟ್, ಆರೋಪಿಗೆ ಜಾಮೀನು ನೀಡಿ ಆದೇಶಿಸಿದೆ.
ಫೆಬ್ರವರಿ 16ರಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭಾಸ್ಕರರಾಮನ್ ಅವರನ್ನು ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಸ್ಟಾರ್ ಹೋಟೆಲ್ ವೊಂದರಲ್ಲಿ ಬಂಧಿಸಿದ್ದರು. ಬಳಿಕ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಫೆ.26ರ ವರೆಗೆ ತಮ್ಮ ವಶಕ್ಕೆ ಪಡೆದಿದ್ದರು. 
ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಅಡಿ ಕಾರ್ತಿ ಚಿದಂಬರಂ ವಿರುದ್ಧ ಇಡಿ ಮೇ, 2017ರಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಪ್ರಕರಣ ಸಂಬಂಧ ಕಾರ್ತಿ ಚಿದಂಬರಂ ಲೆಕ್ಕ ಪರಿಶೋಧಕ (ಸಿಎ) ಎಸ್.ಭಾಸ್ಕರರಾಮನ್ ಅವರನ್ನು ಬಂಧಿಸಿತ್ತು.
ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರ ಹಾಗೂ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (ಫೆಮಾ) ಉಲ್ಲಂಘಿಸಿದ ಆರೋಪ ಎದುರಿಸುತ್ತಿರುವ ಕಾರ್ತಿ ಚಿದಂಬರಂ ಅವರ ವಿರುದ್ಧ ಸಿಬಿಐ ಸಹ ಪ್ರಕರಣ ದಾಖಲಿಸಿಕೊಂಡಿದ್ದು, ಫೆಬ್ರವರಿ 28ರಂದು ಅವರನ್ನು ಚೆನ್ನೈ ವಿಮಾನ ನಿಲ್ದಾಣದಲ್ಲಿ ಬಂಧಿಸಿತ್ತು. ಬಳಿಕ ಜಾಮೀನಿನ ಮೇಲೆ ಕಾರ್ತಿ ಚಿದಂಬರಂ ಬಿಡುಗಡೆಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com