ಎರಡು ತಿಂಗಳಲ್ಲಿ ಪಾಕಿಸ್ತಾನದಿಂದ 633 ಸಲ ಕದನ ವಿರಾಮ ಉಲ್ಲಂಘನೆ: ಕೇಂದ್ರ ಸರ್ಕಾರ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕಳೆದ ಎರಡು ತಿಂಗಳಲ್ಲಿ 633 ಸಲ ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರಸರ್ಕಾರ ರಾಜ್ಯಸಭೆಗೆ ಇಂದು ಮಾಹಿತಿ ನೀಡಿದೆ .
ರಾಜ್ಯಸಭೆ
ರಾಜ್ಯಸಭೆ

ನವದೆಹಲಿ : ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದ  ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕಳೆದ ಎರಡು ತಿಂಗಳಲ್ಲಿ 633 ಸಲ  ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರಸರ್ಕಾರ ರಾಜ್ಯಸಭೆಗೆ ಇಂದು ಮಾಹಿತಿ ನೀಡಿದೆ .

ಈ ವರ್ಷದ ಜನವರಿ ಹಾಗೂ ಫೆಬ್ರವರಿ ತಿಂಗಳಲ್ಲಿ ಪಾಕಿಸ್ತಾನ ಜಮ್ಮುವಿನ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ  ರೇಖೆಬಳಿಯಿಂದ 432 ಸಲ, ಅಂತಾರಾಷ್ಟ್ರೀಯ ಗಡಿಯ ಮೂಲಕ 201 ಸಲ ಕದನ ವಿರಾಮ ಉಲ್ಲಂಘಿಸಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಹನ್ಸ್ ರಾಜ್ ಗಂಗರಾಮ್ ಅಹಿರ್ ಮಾಹಿತಿ ನೀಡಿದ್ದಾರೆ.

2017 ರಲ್ಲಿ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿಯಿಂದ 860 ಸಲ ಹಾಗೂ ಅಂತಾರಾಷ್ಟ್ರೀಯ ಗಡಿ ಮೂಲಕ 111 ಬಾರಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿದೆ ಎಂದು ಅವರು ಹೇಳಿದ್ದಾರೆ.

2002ರಲ್ಲಿ ಅತಿಹೆಚ್ಚು  8376 ಸಲ,   2003ರಲ್ಲಿ 2, 045 ಬಾರಿ ಕದನ ವಿರಾಮ ಉಲ್ಲಂಘನೆ ಪ್ರಕರಣಗಳ ಬಗ್ಗೆ ವರದಿಯಾಗಿರುವುದಾಗಿ ಅವರು ಹೇಳಿದ್ದಾರೆ.

 2003 ನವೆಂಬರ್ ನಿಂದ  ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿ ಭಾಗದಿಂದ ಭಾರತ ಹಾಗೂ ಪಾಕಿಸ್ತಾನದ ಭದ್ರತಾ ಪಡೆಗಳು ಕದನ ವಿರಾಮ ಉಲ್ಲಂಘಿಸಿರುವುದಾಗಿ ಸಚಿವರು ಸದನಕ್ಕೆ ಮಾಹಿತಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com