ಕಾಶ್ಮೀರದ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿಗೆ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ ಮಾಸ್ಟರ್ ಬ್ಲಾಸ್ಟರ್ ಸಚಿನ್!

ಕಾಶ್ಮೀರ ವಿವಾದದ ಕುರಿತು ಭಾರತವನ್ನು ಕೆಣಕಿದ್ದ ಪಾಕಿಸ್ತಾನದ ಮಾಜಿ ಕ್ರಿಗೆಟಿಗ ಶಾಹಿದ್ ಅಫ್ರಿದಿಗೆ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ್ದಾರೆ.
ಸಚಿನ್ ತೆಂಡೂಲ್ಕರ್-ಶಾಹಿದ್ ಅಫ್ರೀದಿ
ಸಚಿನ್ ತೆಂಡೂಲ್ಕರ್-ಶಾಹಿದ್ ಅಫ್ರೀದಿ
ನವದೆಹಲಿ: ಕಾಶ್ಮೀರ ವಿವಾದದ ಕುರಿತು ಭಾರತವನ್ನು ಕೆಣಕಿದ್ದ ಪಾಕಿಸ್ತಾನದ ಮಾಜಿ ಕ್ರಿಗೆಟಿಗ ಶಾಹಿದ್ ಅಫ್ರಿದಿಗೆ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ್ದಾರೆ. 
ಅಫ್ರಿದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ತೆಂಡೂಲ್ಕರ್, ನಮ್ಮ ದೇಶವನ್ನು ಮುನ್ನಡೆಸಲು, ನಿರ್ವಹಿಸಲು ಸಮರ್ಥ ಜನರಿದ್ದಾರೆ, ಹೊರಗಿನ ವ್ಯಕ್ತಿ ನಾವೇನು ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.  ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರಿಗೆ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಮಂಗಳವಾರ ಟಾಂಗ್ ನೀಡಿದ್ದರು. ಈ  ಬೆನ್ನಲ್ಲೇ ಭಾರತೀಯ ಕ್ರಿಕೆಟರ್ ಗಳಾದ ಸುರೇಶ್ ರೈನಾ, ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಸಹ ಅಫ್ರಿದಿಗೆ ಟಾಂಗ್ ನೀಡಿದ್ದಾರೆ. 
ಕಾಶ್ಮೀರದಲ್ಲಿ ಭಾರತೀಯ ಸೇನೆ 13 ಉಗ್ರರನ್ನು ಹೊಡೆದುರುಳಿಸಿತ್ತು. ಈ ಹಿನ್ನಲೆಯಲ್ಲಿ ಕಾಶ್ಮೀರ ವಿವಾದ ಕುರಿತಂತೆ ಟ್ವೀಟ್ ಮಾಡಿದ್ದ ಅಫ್ರಿದಿಯವರು, ಪಿಒಕೆಯನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆದಿದ್ದರು. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚರ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾರ್ವಜನಿಕರಿಗೆ ಭಾರೀ ತೊಂದರೆಯಾಗುತ್ತಿದೆ. ವಿಶ್ವಸಂಸ್ಥೆ (ಯುಎನ್) ಹಾಗೂ ಇನ್ನಿತರೆ ಸಂಸ್ಥೆಗಳು ರಕ್ತಪಾತವನ್ನು ನಿಲ್ಲಿಸಲು ಏಕೆ ಪ್ರಯತ್ನಿಸುತ್ತಿಲ್ಲ ಎಂದು ಬರೆದುಕೊಂಡಿದ್ದರು. ಇದಕ್ಕೆ ಪಾಕಿಸ್ತಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಭಾರತೀಯರಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com