ಕಾಶ್ಮೀರದಲ್ಲಿ ವಿದ್ಯಾರ್ಥಿಗಳು-ಭದ್ರತಾ ಪಡೆಗಳ ನಡುವೆ ಘರ್ಷಣೆ: ಶೈಕ್ಷಣಿಕ ಸಂಸ್ಥೆಗಳು ಬಂದ್

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷನೆ ಏರ್ಪಟ್ಟಿದ್ದು, ಈ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿರುವ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷನೆ ಏರ್ಪಟ್ಟಿದ್ದು, ಈ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿರುವ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ ಎಂದು ಶನಿವಾರ ತಿಳಿದುಬಂದಿದೆ. 
ಶೋಪಿಯಾನ್ ಹಾಗೂ ಗಂದೇರ್ಬಾರ್ ಜಿಲ್ಲೆಗಳಲ್ಲಿ ನಾಗರೀಕರ ಹತ್ಯೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ವಿದ್ಯಾರ್ಥಿಗಳು ಭದ್ರತಾ ಪಡೆಗಳ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. 
ನಿನ್ನೆಯಷ್ಟೇ ಶುಕ್ರವಾರ ಪ್ರಾರ್ಥನೆ ಮುಕ್ತಾಯಗೊಂಡ ಬಳಿಕ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಘರ್ಷಣೆ ಏರ್ಪಟ್ಟಿದೆ. ಇದರಂತೆ ವಿದ್ಯಾರ್ಥಿಗಳ ಪ್ರತಿಭಟನೆ ಹತ್ತಿಕ್ಕುವ ಸಲುವಾಗಿ ಶೈಕ್ಷಣಿಕ ಸಂಸ್ಥೆಗಳನ್ನು ಬಂದ್ ಮಾಡಲಾಗಿದೆ. ಅಲ್ಲದೆ, ಪರೀಕ್ಷೆಗಳನ್ನು ಮುಂದೂಡಿದ್ದಾರೆನ್ನಲಾಗಿದೆ. 
ಶ್ರೀನಗರದಲ್ಲಿ ಎಂದಿನಂತೆ ವ್ಯವಹಾರ, ಸಾರ್ವಜನಿಕ ಸಾರಿಗೆ ವ್ಯವಸ್ಥೆ, ಅಂಗಡಿಗಳು ಕಾರ್ಯನಿರ್ವಹಿಸುತ್ತಿವೆ. ಬಾರಾಮುಲ್ಲಾ ಮತ್ತು ಬನ್ನೀಹಾಲ್ ನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಲ್ಲದೆ, ಶ್ರೀನಗರ ಸೇರಿದಂತೆ ಇನ್ನಿತರೆ ಪ್ರಮುಖ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com