ಜೋಧ್ ಪುರ: ಸ್ವಯಂಘೋಷಿತ ದೇವಮಾನವ ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಪ್ರಕರಣದ ಅಂತಿಮ ವಿಚಾರಣೆಯನ್ನು ವಿಶೇಷ ಎಸ್ಸಿ, ಎಸ್ಟಿ ಕೋರ್ಟ್ ಶನಿವಾರ ಪೂರ್ಣಗೊಳಿಸಿದ್ದು, ಏಪ್ರಿಲ್ 25ಕ್ಕೆ ತೀರ್ಪು ಕಾಯ್ದಿರಿಸಿದೆ.
ವಿಶೇಷ ಕೋರ್ಟ್ ನ್ಯಾಯಾಧೀಶ ಮಧುಸುದನ್ ಶರ್ಮಾ ಅವರು ಕಳೆದ ಐದು ತಿಂಗಳಿಂದ ಆರೋಪಿ ಪರ ವಕೀಲರು ಮತ್ತು ಸರ್ಕಾರಿ ವಕೀಲರು ಮಂಡಿಸಿದ ವಾದ-ಪ್ರತಿವಾದವನ್ನು ಆಲಿಸಿದ್ದು, ತೀರ್ಪು ಕಾಯ್ದಿರಿಸಿದ್ದಾರೆ.
ಇಂದು ಅಂತಿಮ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಕೋರ್ಟ್ ತೀರ್ಪು ಕಾಯ್ದಿರಿಸಿದೆ ಎಂದು ಸಂತ್ರಸ್ಥೆಯರ ಪರ ವಕೀಲ ಪಿಸಿ ಸೋಲಂಕಿ ಅವರು ತಿಳಿಸಿದ್ದಾರೆ.
ಆಶ್ರಮದಲ್ಲಿ ಅಸಾರಾಂ ಬಾಪು ತನ್ನ ಮೇಲೆ ಅತ್ಯಾಚಾರ ಎಸಗಿರುವುದಾಗಿ ಆರೋಪಿ 16 ವರ್ಷದ ವಿದ್ಯಾರ್ಥಿನಿ ಸ್ವಯಂ ಘೋಷಿತ ದೇವಮಾನವನ ವಿರುದ್ಧ ಕೇಸ್ ದಾಖಲಿಸಿದ್ದಳು.
ಈ ಪ್ರಕರಣ ಸಂಬಂಧ ಜೋಧಪುರ ಪೊಲೀಸರು ಅಸಾರಾಂನ 2013ರ ಆಗಸ್ಟ್ 31ರಂದು ಬಂಧಿಸಿದ್ದು, ಅಂದಿನಿಂದಲೂ ಅವರು ಜೈಲಿನಲ್ಲಿದ್ದಾರೆ.
ಅಸಾರಾಂ ಬಾಪು ವಿರುದ್ಧದ ಅತ್ಯಾಚಾರ ಆರೋಪ ಸಾಬೀತಾದರೆ ಗರಿಷ್ಠ 10 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ.