ಕಾಶ್ಮೀರ: ಉಗ್ರರ ಅಡಗುತಾಣ ಧ್ವಂಸಗೊಳಿಸಿದ ಸೇನೆ, ರೈಫಲ್ ಗಳು ಜಪ್ತಿ

ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವೊಂದನ್ನು ಧ್ವಂಸಗೊಳಿಸಿದ್ದು,....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಶ್ರೀನಗರ: ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ರಾಜೋರಿ ಜಿಲ್ಲೆಯಲ್ಲಿ ಉಗ್ರರ ಅಡಗುತಾಣವೊಂದನ್ನು ಧ್ವಂಸಗೊಳಿಸಿದ್ದು, ಅಲ್ಲಿಂದ ಎರಡು ಎಕೆ ರೈಫಲ್ ಗಳು ಮತ್ತು ಮದ್ದು ಗುಂಡುಗಳನ್ನು ಜಪ್ತಿ ಮಾಡಲಾಗಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಬುಧಲ್ ಪ್ರದೇಶದಲ್ಲಿ ಸೇನೆ ಉಗ್ರರಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರ ಅಡಗುತಾಣ ಪತ್ತೆಯಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಯೌಗಲ್ ಮನ್ಹಾಸ್ ಅವರು ಹೇಳಿದ್ದಾರೆ.
ಅಡಗುತಾಣದಲ್ಲಿದ್ದ ಎರಡು ಎಕೆ ರೈಫಲ್, ಎರಡು ಮ್ಯಾಗಜೀನ್ ಮತ್ತು 60 ಸುತ್ತಿನ ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಇದುವರೆಗೂ ಯಾರನ್ನು ಬಂಧಿಸಿಲ್ಲ ಎಂದು ಮನ್ಹಾಸ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com