ಅಹ್ಮದ್ನಗರ್: ದ್ವಿಚಕ್ರ ವಾಹನದಲ್ಲಿ ಬಂದಿರುವ ದುಷ್ಕರ್ಮಿಗಳು ಶಿವಸೇನೆಯ ಇಬ್ಬರು ಸ್ಥಳೀಯ ನಾಯಕರನ್ನು ಗುಂಡಿಟ್ಟು ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ ಅಹ್ಮದ್ನಗರ್'ದಲ್ಲಿ ಶನಿವಾರ ನಡೆದಿದೆ.
ಅಹ್ಮದ್ನಗರ್'ದ ಶಾಹುನಗರ ಪ್ರದೇಶದಲ್ಲಿ ನಿನ್ನೆ ಸಂಜೆ 5.15ರ ಸುಮಾರಿಗೆ ಘಟನೆ ನಡೆದಿದೆ.
ನಿನ್ನೆ ಸಂಜೆ ಬೈಕ್ ನಲ್ಲಿ ಬಂದಿರುವ ದುಷ್ಕರ್ಮಿಗಳು ಸಂಜಯ್ ಹಾಗೂ ವಸಂತ್ ಅವರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ವೇಳೆ ಸಂಜಯ್ ಹಾಗೂ ವಸಂತ್ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಸ್ಥಳದಲ್ಲಿದ್ದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಮೂಲಕ ದುಷ್ಕರ್ಮಿಗಳ ಪತ್ತೆ ಹಚ್ಚಲು ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.