ಕೋಲ್ಕತಾದಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯ, 10 ಜೀವಂತ ಕಚ್ಛಾ ಬಾಂಬ್ ಗಳು ಪತ್ತೆ

ಕೋಲ್ಕತಾದಲ್ಲಿ ಬಾಂಬ್ ವೊಂದು ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕೋಲ್ಕತಾ: ಕೋಲ್ಕತಾದಲ್ಲಿ ಬಾಂಬ್ ವೊಂದು ಸ್ಫೋಟಿಸಿದ ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ಕೋಲ್ಕತಾದ ಡಮ್ ಡಮ್ ರೈಲ್ವೇ ನಿಲ್ದಾಣದ ಕಂಟೋನ್ಮೆಂಟ್ ಸ್ಥಳದಲ್ಲಿ ಬಾಂಬ್ ಸ್ಫೋಟವಾಗಿದ್ದು, ಈ ವೇಳೆ ಸ್ಥಳದಲ್ಲಿದ್ದ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಪ್ರಸ್ತುತ ಘಟನಾ ಸ್ಥಳಕ್ಕೆ ಕೋಲ್ಕತಾ ರೈಲ್ವೇ ಭದ್ರತಾ ಸಿಬ್ಬಂದಿ ಮತ್ತು ಪೊಲೀಸರು ದೌಡಾಯಿಸಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಅಧಿಕಾರಿಗಳಿಗೆ 10 ಜೀವಂತ ಕಚ್ಛಾ ಬಾಂಬ್ ಗಳು ದೊರೆತಿದ್ದು, ಹೆಚ್ಚುವರಿ ತನಿಖೆಗಾಗಿ ತಜ್ಞರನ್ನು ಸ್ಥಳಕ್ಕೆ ಕರೆಸಲು ನಿರ್ಧರಿಸಲಾಗಿದೆ. ಅಂತೆಯೇ ಗಾಯಾಳು ವ್ಯಕ್ತಿಯನ್ನು ಸಮೀಪದ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com