ಲೋಕಸಭೆ ಉಪ ಚುನಾವಣೆಯಲ್ಲಿ ಒಂದಾಗಿದ್ದ ಎಸ್ಪಿ ಬಿಎಸ್ಬಿ ಪಕ್ಷದ 24 ನಾಯಕರು ಬಿಜೆಪಿಗೆ ಸೇರ್ಪಡೆ!

ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಇಬ್ಬರು ಮಾಜಿ ಸಂಸದರು ಸೇರಿದಂತೆ 22 ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ...
ಬಿಜೆಪಿ
ಬಿಜೆಪಿ
ಲಖನೌ: ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ)ದ ಇಬ್ಬರು ಮಾಜಿ ಸಂಸದರು ಸೇರಿದಂತೆ 22 ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ಮಹೇಂದ್ರ ನಾಥ್ ಪಾಂಡೆ ಸಮ್ಮುಖದಲ್ಲಿ ಬಿಎಸ್ಪಿಯ ಮಾಜಿ ಸಂಸದ ಅಶೋಕ್ ರಾವತ್ ಮತ್ತು ಎಸ್ಪಿಯ ಮಾಜಿ ಸಂಸದ ಜೈ ಪ್ರಕಾಶ್ ರಾವತ್ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರು ಅನುಸರಿಸಿದ ನೀತಿಗಳು ಮತ್ತು ಅಭಿವೃದ್ಧಿ-ಆಧಾರಿತ ರಾಜಕೀಯದಿಂದ ಪ್ರಭಾವಿತರಾಗಿ ಇಬ್ಬರು ಮಾಜಿ ಸಂಸದರು ಬಿಜೆಪಿಗೆ ಸೇರ್ಪಡೆಗೊಂಡಿರುವುದಾಗಿ ಹೇಳಿದ್ದಾರೆ. 
ಇತ್ತೀಚೆಗೆ ನಡೆದ ಲೋಕಸಭಾ ಉಪ ಚುನಾವಣೆಯಲ್ಲಿ ಬಿಎಸ್ಪಿ ಮತ್ತು ಎಸ್ಪಿ ಪಕ್ಷ ಒಟ್ಟಾಗಿ ಎದುರಿಸಿ ಉತ್ತರಪ್ರದೇಶ ಮುಖ್ಯಮಂತ್ರಿ ಅವರು ಪ್ರತಿನಿಧಿಸಿದ್ದ ಗೋರಕ್ ಪುರ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಪ್ರತಿನಿಧಿಸಿದ್ದ ಫುಲ್ಪುರ್ ಕ್ಷೇತ್ರಗಳಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com