ಮುಂಬೈನಲ್ಲಿ ಭೀಕರ ಅಪಘಾತ: ಬ್ಯಾರಿಕೇಡ್ ಗೆ ಗುದ್ದಿದ ಟ್ರಕ್, ಕರ್ನಾಟಕ ಮೂಲದ 18 ಮಂದಿ ಸಾವು!

Published On :
ಮುಂಬೈ: ಮಂಗಳವಾರ ಬೆಳಗ್ಗೆ ಮುಂಬೈ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಜನರು ತಂಬಿದ್ದ ಟ್ರಕ್ ವೊಂದು ಬ್ಯಾರಿಕೇಡ್ ಗೆ ಗುದ್ದಿದ ಪರಿಣಾಮ ಕರ್ನಾಟಕ ಮೂಲದ ಕನಿಷ್ಠ 18 ಮಂದಿ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.
ಮುಂಬೈನ ಹೊರವಲಯದ ಖಂಡಾಲದಲ್ಲಿರುವ ಪುಣೆ-ಸತಾರಾ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಟ್ರಕ್ ನಲ್ಲಿ ಸುಮಾರು 35 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಖಂಬಟ್ಕಿ ಘಾಟ್ ಪ್ರದೇಶದಲ್ಲಿ ಎಸ್ ಆಕಾರದಲ್ಲಿರುವ ರಸ್ತೆಯಲ್ಲಿ ಟ್ರಕ್ ಚಾಲಕ ತಿರುವು ಮಾಡುತ್ತಿರುವಾಗ ಟ್ರಕ್ ಚಾಲಕನ ನಿಯಂತ್ರಣ ತಪ್ಪಿದ್ದು, ನೇರವಾಗಿ ಬ್ಯಾರಿಕೇಡ್ ಗೆ ಗುದ್ದಿದೆ. ಟ್ರಕ್ ಗುದ್ದಿದ ರಭಸಕ್ಕೆ ಟ್ರಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಸೇರಿದಂತೆ ಟ್ರಕ್ ನಲ್ಲಿದ್ದ 17 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತರೆಲ್ಲರೂ ಕರ್ನಾಟಕದ ವಿಜಯಪುರ ಮೂಲದ ಕಟ್ಟಡ ನಿರ್ಮಾಣ ಕಾರ್ಮಿಕರು ಎಂದು ತಿಳಿದುಬದಿದೆ.
ಅಂತೆಯೇ 17 ಮಂದಿ ಗಾಯಗೊಂಡಿದ್ದು, ಕೂಡಲೇ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇನ್ನುಘಟನಾ ಸ್ಥಳಕ್ಕೆ ಖಂಡಾಲಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಚಾಲಕನ ಅತಿಯಾದ ವೇಗ ಕಾರಣ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


