ದೇಶ

ಸ್ವಚ್ಛಗ್ರಹ ಅಭಿಯಾನ: ಬಿಹಾರ ಸರ್ಕಾರವನ್ನು ಕೊಂಡಾಡಿದ ಪ್ರಧಾನಿ ಮೋದಿ

ವಾರದಿಂದ ನಡೆದ ಸ್ವಚ್ಚಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೊಂಡಾಡಿದ್ದಾರೆ...

ಸ್ವಚ್ಛಗ್ರಹ ಅಭಿಯಾನ: ಬಿಹಾರ ಸರ್ಕಾರವನ್ನು ಕೊಂಡಾಡಿದ ಪ್ರಧಾನಿ ಮೋದಿ
ಪ್ರಧಾನಮಂತ್ರಿ ನರೇಂದ್ರ ಮೋದಿ
Published On :
ಮೋತಿಹಾರ್: ವಾರದಿಂದ ನಡೆದ ಸ್ವಚ್ಚಗ್ರಹ ಅಭಿಯಾನವನ್ನು ಯಶಸ್ವಿಯಾಗಿ ನಡೆಸಿದ್ದಕ್ಕೆ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಉಪ ಮುಖ್ಯಮಂತ್ರಿ ಸುಶೀಲ್ ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೊಂಡಾಡಿದ್ದಾರೆ. 
ಸತ್ಯಾಗ್ರಹದ ಶತಮಾನೋತ್ಸವದ ಹಿನ್ನಲೆಯಲ್ಲಿ ಬಿಹಾರ ರಾಜ್ಯದ ಮೋತಿಹಾರದ ಚಂಪಾರಣ್ ನಲ್ಲಿ ಬೃಹತ್ ಸಮಾವೇಶವನ್ನು ಆಯೋಜಿಸಲಾಗಿದ್ದು, ಸಮಾವೇಶವನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿದ್ದಾರೆ. 
ಸಮಾವೇಶದಲ್ಲಿ ಸ್ವಚ್ಛತಾ ಅಭಿಯಾನದ 20 ಸಾವಿರಕ್ಕೂ ಹೆಚ್ಚು ಸದಸ್ಯರು ಭಾಗಿಯಾಗಿದ್ದರು. ಸ್ವಚ್ಛತೆಗೆ ಅಪಾರ ಕೊಡುಗೆಯನ್ನು ನೀಡಿದ್ದ ಸ್ವಚ್ಛಾಗ್ರಹಿಗಳಿಗೆ ಪ್ರಧಾನಿ ಮೋದಿಯವರು ಚಾಂಪಿಯನ್ಸ್ ಆಫ್ ಸ್ವಚ್ಛಾಗ್ರಹೀಸಿ ಎಂಬ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. 
ಸತ್ಯಾಗ್ರಹವನ್ನು 100 ವರ್ಷಗಳ ಹಿಂದೆ ಏ.10 1917ರಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ಆರಂಭಿಸಿದ್ದರು, ಈ ಮೂಲಕ ಸತ್ಯಾಗ್ರಹವನ್ನು ದೇಶದೊಂದಿಗೆ ಬೆಸೆದರು. ಸ್ವಚ್ಛ ಭಾರತಕ್ಕೆ ದುಡಿಯುತ್ತಿರುವ ಸ್ವಚ್ಛಾಗ್ರಹಿಗಳಲ್ಲಿ ಸತ್ಯಾಗ್ರಹ ಈಗಲೂ ಜೀವಂತವಾಗಿದೆ ಎಂದು ಮೋದಿಯವರು ಹೇಳಿದ್ದಾರೆ. 
ಬಿಹಾರ ರಾಜ್ಯದಲ್ಲಿ ಸತ್ಯಾಗ್ರಹ ಅರಂಭಿಸಿದ ಬಳಿಗ ಗಾಂಧೀಜಿಯವರು ಮಹಾತ್ಮರಾದರು. ಜಯಪ್ರಕಾಶ್ ನಾರಾಯಣ್ ಕೂಡ ಅವರಿಂದ ಪ್ರೇರಣೆ ಪಡೆದುಕೊಂಡರು ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.