ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಸೇನೆಗೆ ಒತ್ತಡ ಹೇರಲು ಸಾಧ್ಯವಿಲ್ಲ: ನಿರ್ಮಲಾ ಸೀತಾರಾಮನ್

ದೇಶಿಯವಾಗಿ ಅಭಿವೃದ್ಧಿಪಡಿಸಲಾಗಿರುವ ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಭಾರತೀಯ ಸೇನೆಗೆ ಒತ್ತಡ ಹೇರುವುದಕ್ಕೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್
ಚೆನ್ನೈ: ದೇಶಿಯವಾಗಿ  ಅಭಿವೃದ್ಧಿಪಡಿಸಲಾಗಿರುವ ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಭಾರತೀಯ ಸೇನೆಗೆ ಒತ್ತಡ ಹೇರುವುದಕ್ಕೆ ಸಾಧ್ಯವಿಲ್ಲ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ. 
ಚೆನ್ನೈ ನಲ್ಲಿ ಏ.11 ರಂದು ಡಿಫೆನ್ಸ್ ಎಕ್ಸಿಬಿಷನ್ ನ್ನು ಉದ್ಘಾಟಿಸಿ ಮಾತನಾಡಿರುವ ನಿರ್ಮಲಾ ಸೀತಾರಮನ್, ರಕ್ಷಣಾ ಕ್ಷೇತ್ರದಲ್ಲಿ ರಫ್ತು ಮತ್ತು ಆಮದಿನ ನಡುವೆ ಅತಿ ಹೆಚ್ಚು ಅಂತರ ಇರುವುದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಭಾರತೀಯ ಸೇನೆಗೆ "ಸಾಧ್ಯವಾದಷ್ಟೂ" ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನೇ ಖರೀದಿ ಮಾಡುವಂತೆ ಸಲಹೆ ನೀಡಬಹುದೇ ಹೊರತು ಒತ್ತಡ ಹೇರುವುದಕ್ಕೆ ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಭಾರತೀಯ ಸೇನೆ, ವಾಯುಪಡೆ ಹಾಗೂ ನೌಕಾ ಪಡೆಗಳ ಕಾರ್ಯಾಚರಣೆಯ ಅಗತ್ಯತೆಗಳನ್ನು ನಿರ್ಧರಿಸುವ ಗೆರೆಯನ್ನು ತಾವು ದಾಟುವುದಕ್ಕೆ ಸಾಧ್ಯವಿಲ್ಲ, ಸೇನೆ ಮೇಲೆ ದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನೇ ಖರೀದಿಸಬೇಕೆಂದು ಒತ್ತಡ ಹೇರುವುದಕ್ಕೆ ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com