ಕುಲ್ಗಾಮ್ ಉಗ್ರ ನಿಗ್ರಹ ಕಾರ್ಯಾಚರಣೆ: ಭಾರತೀಯ ಯೋಧ ಹುತಾತ್ಮ, ಇಬ್ಬರು ನಾಗರಿಕರ ಸಾವು

Published On :
ಶ್ರೀನಗರ: ಕಣಿವೆ ರಾಜ್ಯ ಕಾಶ್ಮೀರದಲ್ಲಿ ಅವಿತಿದ್ದ ಉಗ್ರರ ವಿರುದ್ಧ ಕಾರ್ಯಾಚರಣೆಗೆ ಮುಂದಾಗಿದ್ದ ಭಾರತೀಯ ಯೋಧರಿಗೆ ಸ್ಥಳೀಯರು ಅಡ್ಡಿ ಪಡಿಸಿದ್ದು, ಈ ವೇಳೆ ನಡೆದ ಸಂಘರ್ಷದಲ್ಲಿ ಸೇನೆಯ ಓರ್ವ ಯೋಧ ಮತ್ತು ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ಕುದ್ವಾನಿ ಪ್ರದೇಶದಲ್ಲಿ ಬುಧವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಉಗ್ರರೊಂದಿಗೆ ನಡೆಯುತ್ತಿರುವ ಭಾರೀ ಗುಂಡಿನ ಚಕಮಕಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದಾರೆ. ಅಂತೆಯೇ ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕಟ್ಟಡವೊಂದರಲ್ಲಿ ಮೂವರು ಉಗ್ರರು ಅಡಗಿರುವುದು ಖಚಿತವಾಗಿದ್ದು ಅವರಿಗಾಗಿ ಭಾರೀ ಸಂಖ್ಯೆಯ ಯೋಧರು ಕಾರ್ಯಾಚರಣೆಗಿಳಿದಿದ್ದಾರೆ. ಈ ವೇಳೆ ಯೋಧರಿಗೆ ಸ್ಥಳೀಯರು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ್ದು, ಅಧಿಕಾರಿಗಳೊಂದಿಗೆ ವಾಗ್ವಾದಕ್ಕೆ ಇಳಿದರು. ಇದರಿಂದ ಸ್ಥಳದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು, ಅಲ್ಲದೆ ಈ ವೇಳೆ ಸ್ಥಳೀಯರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ಏರ್ಪಟಿದ್ದು, ಘಟನೆಯಲ್ಲಿ ಇಬ್ಬರು ನಾಗರಿಕರು ಹತರಾಗಿದ್ದಾರೆ. ಅಂತೆಯೇ 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮುಜಾಗ್ರತಾ ಕ್ರಮವಾಗಿ ಕಾರ್ಯಾಚರಣೆ ನಡೆಯುತ್ತಿರುವ ಕುಲ್ಗಾಮ್ ಮತ್ತು ಅನಂತ್‌ನಾಗ್ ಜಿಲ್ಲೆಗಳಲ್ಲಿ ಮೊಬೈಲ್ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಅಂತೆಯೇ ಶ್ರೀನಗರ ಮತ್ತು ಬನಿಹಾಲ್ ನಡುವಿನ ರೈಲು ಸಂಚಾರವನ್ನು ಕೂಡ ಸ್ಥಗಿತಗೊಳಿಸಲಾಗಿದ್ತು, ಶ್ರೀನಗರ ಬಾರಾಮುಲ್ಲ ಹೆದ್ದಾರಿ ಸೇವೆ ಸ್ಥಗಿತಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


