ಎಸ್‌ಪಿ-ಬಿಎಸ್‌ಪಿ ಒಂದಾದರೆ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ: ಮುಲಾಯಂ

ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಒಂದಾದರೆ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ...
ಮುಲಾಯಂ ಸಿಂಗ್ ಯಾದವ್
ಮುಲಾಯಂ ಸಿಂಗ್ ಯಾದವ್
ಲಖನೌ: ಸಮಾಜವಾದಿ ಪಕ್ಷ(ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಒಂದಾದರೆ ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಎಂದು ಸಮಾಜವಾದಿ ಪಕ್ಷದ ವರಿಷ್ಠ ಮುಲಾಯಂ ಸಿಂಗ್ ಯಾದವ್  ಹೇಳಿದ್ದಾರೆ. 
ಇದೇ ಮೊದಲ ಬಾರಿಗೆ ಎಸ್ಪಿ ಮತ್ತು ಬಿಎಸ್ಪಿ ಪಕ್ಷಗಳ ಮೈತ್ರಿ ಬಗ್ಗೆ ಇದೇ ಮೊದಲ ಬಾರಿಗೆ ಮೌನ ಮುರಿದಿರುವ ಮುಲಾಯಂ ಸಿಂಗ್ ಮೈತ್ರಿ ಮಾಡಿಕೊಂಡಿದ್ದು ಸರಿಯಾಗಿಯೇ ಇದೆ ಎಂದು ಹೇಳಿದ್ದಾರೆ. 
ಉಭಯ ಪಕ್ಷಗಳು 1995ರಲ್ಲಿ ರಾಜ್ಯ ಅತಿಥಿ ಗೃಹ ವಿಚಾರದಲ್ಲಿ ದೂರವಾಗಿದ್ದವು. ಸುಮಾರು 23 ವರ್ಷಗಳ ನಂತರ ಕಳೆದ ತಿಂಗಳು ನಡೆದ ಲೋಕಸಭೆ ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮೈತ್ರಿ ಮಾಡಿಕೊಂಡಿದ್ದವು. 
ಈ ಮೈತ್ರಿಯನ್ನು ಸ್ವಾಗತಿಸಿರುವ ಮುಲಾಯಂ ಸಿಂಗ್ ಮುಂಬರುವ 2019ರ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಯಶಸ್ವಿಯಾಗಲಿ. ಈ ಮೈತ್ರಿ ಮುಂದುವರಿಸಿಕೊಂಡು ಹೋಗಬೇಕು. ಟಿಕೆಟ್ ಹಂಚಿಕೆ ವಿಷಯ ಸಹಿತ ಯಾವುದರಲ್ಲೂ ಭಿನ್ನಾಭಿಪ್ರಾಯ ಉಂಟಾಗಬಾರದು ಎಂದು ಮೈನ್ ಪುರಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಹೇಳಿದ್ದಾರೆ. 
ಇನ್ನು ಮುಲಾಯಂ ಸಿಂಗ್ ಅವರು ಪಕ್ಷದ ಅಧ್ಯಕ್ಷರಾಗಿದ್ದಾಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸಮಾನ ಅಂತರ ಕಾಯ್ದುಕೊಂಡಿದ್ದರು. 2017ರ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com