ಕತುವಾ ಅತ್ಯಾಚಾರ ಪ್ರಕರಣ: ನ್ಯಾಯದ ಭರವಸೆ ನೀಡಿದ ಸಿಎಂ ಮುಫ್ತಿ

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದಾಗಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಗುರುವಾರ ಹೇಳಿದ್ದಾರೆ...
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ
Updated on
ಕತುವಾ (ಜಮ್ಮು-ಕಾಶ್ಮೀರ): 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡುವುದಾಗಿ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಗುರುವಾರ ಹೇಳಿದ್ದಾರೆ. 
ಪ್ರಕರಣ ಸಂಬಂಧ ಸಾಮಾಜಿಕ ಜಾಲತಾಣ ಟ್ವಿಟರ್'ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೇಜವಾಬ್ದಾರಿಯುತ ಕ್ರಮ ಹಾಗೂ ಜನರ ಹೇಳಿಕೆಗಳು ಕಾನೂನಿಗೆ ಧಕ್ಕೆಯುಂಟಾಗುವುದಿಲ್ಲ. ಸೂಕ್ತ ವಿಧಾನಗಳನ್ನು ಅನುಸರಿಸಲಾಗುತ್ತಿದೆ. ತನಿಖೆ ಪ್ರಗತಿಯಲ್ಲಿದೆ, ಸಂತ್ರಸ್ತರಿಗೆ ನ್ಯಾಯ ದೊರಕಿಸಿಕೊಡಲಾಗುವುದು ಎಂದು ಹೇಳಿದ್ದಾರೆ. 
ಜ.17ರ ರಸ್ಸಾನಾ ಅರಣ್ಯಪ್ರದೇಶದಲ್ಲಿ ಬಾಲಕಿಯ ದೇಹ ಪತ್ತೆಯಾಗಿತ್ತು. ಒಂದು ವಾರದಿಂದ ಆಕೆ ನಾಪತ್ತೆಯಾಗಿದ್ದಳು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com