ಕಥುವಾ ಪ್ರಕರಣ: ಇಂತಹ ಹೇಯ ಕೃತ್ಯದ ಅಪರಾಧಿಯನ್ನು ಯಾರಾದರೂ ರಕ್ಷಿಸುವುದು ಹೇಗೆ ಸಾಧ್ಯ- ರಾಹುಲ್
ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಅತ್ಯಾಚಾರ ಪ್ರಕರಣವನ್ನು ಮಾನವೀಯತೆಯ ವಿರುದ್ಧದ ಅಪರಾಧ...
ನವದೆಹಲಿ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣದ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಅತ್ಯಾಚಾರ ಪ್ರಕರಣವನ್ನು ಮಾನವೀಯತೆಯ ವಿರುದ್ಧದ ಅಪರಾಧ ಎಂದು ಹೇಳಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿಯೂ ರಾಜಕಾರಣ ಮಾಡುವವರನ್ನು ರಾಹುಲ್ ಗಾಂಧಿ ಪ್ರಶ್ನಿಸಿದ್ದು, ಇಂತಹ ಹೇಯ ಕೃತ್ಯದಲ್ಲಿಯೂ ರಾಜಕಾರಣಕ್ಕೆ ಅವಕಾಶ ನೀಡಬಾರದು ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಸಚಿವ ವಿಕೆ ಸಿಂಗ್ 8 ವರ್ಷದ ಬಾಲಕಿಯನ್ನು ರಕ್ಷಿಸಲು ನಾವು ಮನುಷ್ಯರಾಗಿ ವಿಫಲರಾಗಿದ್ದೇವೆ, ಆದರೆ ಆಕೆಗೆ ಅನ್ಯಾಯವಾಗುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
ಎಂಟು ವರ್ಷದ ಬಾಲೆಯೊಬ್ಬಳನ್ನು ಅಪಹರಿಸಿ, ಅತ್ಯಾಚಾರ ಎಸಗಿ, ದೈಹಿಕವಾಗಿ ಹಿಂಸಿಸಿ, ಕೊಂದುಹಾಕಿದ ಘಟನೆ ಕಥುವಾ ಜಿಲ್ಲೆಯಲ್ಲಿ ನಡೆದಿತ್ತು. ಸಂತ್ರಸ್ಥೆಯು ಮುಸ್ಲಿಂ ಬುಡಕಟ್ಟು ಸಮುದಾಯಕ್ಕೆ ಸೇರಿದವಳು. ಬಾಲಕಿ ಕಾಣೆಯಾದ ಒಂದು ವಾರದ ಬಳಿಕ ಜನವರಿ 17ರಂದು ಆಕೆಯ ಶವ ಪತ್ತೆಯಾಗಿತ್ತು.