ಚೆನ್ನೈ: ಜೂನ್ 1ರಿಂದ ಮುಂದಿನ ನೀರಾವರಿ ಋತು ಆರಂಭವಾಗುವ ಮುನ್ನ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ತಮಿಳುನಾಡು ಸರ್ಕಾರ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಾಸಿದೆ.
ಈ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ಅವರು, ಇಂದು ಚೆನ್ನೈಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.
ಫೆಬ್ರವರಿ 16ರಂದು ಸುಪ್ರೀಂ ಕೋರ್ಟ್ ನೀಡಿದ ಆದೇಶದಂತೆ ಕೇಂದ್ರ ಸರ್ಕಾರ ಈ ಕೂಡಲೇ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕು. ರಾಜ್ಯದ ರೈತರು ಕೃಷಿಗಾಗಿ ಕಾವೇರಿ ನೀರಿನ ಮೇಲೆ ಅವಲಂಬಿತರಾಗಿದ್ದಾರೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.
ಕಾವೇರಿ ಪರ ಹೋರಾಟ ನಡೆಸುತ್ತಿರುವ ತಮಿಳುಪರ ಸಂಘಟನೆಗಳು ರಕ್ಷಣಾ ಪ್ರದರ್ಶನ ಉದ್ಘಾಟನೆಗೆ ಆಗಮಿಸಿದ್ದ ಪ್ರಧಾನಿ ಮೋದಿ ಅವರಿಗೆ ಕಪ್ಪು ಬಾವುಟ್ ತೋರಿಸುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.