ಕುಲದೀಪ್ ಸಿಂಗ್ ಸೆಂಗರ್
ಕುಲದೀಪ್ ಸಿಂಗ್ ಸೆಂಗರ್

ಉನ್ನಾವೊ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ಬಂಧನ ಕುರಿತು ಅಲಹಾಬಾದ್ ಹೈಕೋರ್ಟ್ ನಿರ್ಧಾರ ನಾಳೆ

ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಇಲ್ಲಿಯವರೆಗೂ ಏಕೆ ಬಂದಿಸಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಇಲ್ಲಿನ ರಾಜ್ಯಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದೆ.

ಉತ್ತರ ಪ್ರದೇಶ : ಉನ್ನಾವೊ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಇಲ್ಲಿಯವರೆಗೂ ಏಕೆ ಬಂದಿಸಿಲ್ಲ ಎಂದು ಅಲಹಾಬಾದ್ ಹೈಕೋರ್ಟ್   ರಾಜ್ಯಸರ್ಕಾರದ ಪರ ವಕೀಲರನ್ನು ಪ್ರಶ್ನಿಸಿದ್ದು, ನಾಳೆ ನಿರ್ಧಾರ ಪ್ರಕಟಿಸಲಿದೆ.

17 ವರ್ಷ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗರ್  ವಿರುದ್ಧ ಚಾರ್ಜ್ ಶೀಟ್ ದಾಖಲಾಗಿದ್ದು, ನಾಳೆ ಮಧ್ಯಾಹ್ನ 2 ಗಂಟೆ ನಿರ್ಧಾರ ಪ್ರಕಟಿಸುವುದಾಗಿ ನ್ಯಾಯಾಲಯ ಹೇಳಿದೆ.

 ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಸರ್ಕಾರ ಹೇಳಿದ ಕೆಲ ತಾಸುಗಳ ನಂತರ ಆಡಳಿತಾರೂಢ  ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಪೊಲೀಸರು ಎಫ್ ಐ ಆರ್  ದಾಖಲಿಸಿಕೊಂಡಿದ್ದಾರೆ.

 ಸ್ಥಳೀಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ ಎಂದು ಗೃಹ ಕಚೇರಿಯ ಪ್ರಧಾನ ಕಾರ್ಯದರ್ಶಿ ಅರವಿಂದ್ ಕುಮಾರ್ ಹೇಳಿದ್ದಾರೆ. ಈ ಪ್ರಕರಣದ ತನಿಖೆಯನ್ನು ನ್ಯಾಯಯುತವಾಗಿ ನಡೆಯಬೇಕೆಂದು ಸಿಬಿಐಗೆ ಪತ್ರ ಬರೆಯಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮಾಖಿ ಪೊಲೀಸ್ ಠಾಣೆ ಪ್ರದೇಶದಲ್ಲಿ ಪೋಕ್ಸೋ  ವಿನಾಯಿತಿ ಕಾಯ್ದೆ ಹಾಗೂ ಐಪಿಸಿ ಸೆಕ್ಷನ್ ಅನ್ವಯ ಶಾಸಕ ಸೆಂಗರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.  376, 366, 363, ಹಾಗೂ 506 ರ ಪ್ರಕಾರ ಆತನ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com