ಕಥುವಾ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸಿಜೆಐಗೆ ವಕೀಲರ ಮನವಿ

ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ...
ಕಥುವಾ ಅತ್ಯಾಚಾರ ಪ್ರಕರಣ ವಿರೋಧಿಸಿ ಪ್ರತಿಭಟನೆಯ ಚಿತ್ರ
ಕಥುವಾ ಅತ್ಯಾಚಾರ ಪ್ರಕರಣ ವಿರೋಧಿಸಿ ಪ್ರತಿಭಟನೆಯ ಚಿತ್ರ
Updated on: 

ನವದೆಹಲಿ :  ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಬಳಿ ಸುಪ್ರೀಂಕೋರ್ಟ್ ನ ವಕೀಲರ ತಂಡವೊಂದು ಮನವಿ ಸಲ್ಲಿಸಿದೆ.

ಕುಥುವಾ ಅತ್ಯಾಚಾರ ಪ್ರಕರಣದಿಂದ ಉಂಟಾಗಿರುವ  ಕಾನೂನು ಸುವ್ಯವಸ್ಥೆ ಸಂಬಂಧ ಜಮ್ಮು ವಕೀಲರಿಂದ  ಮಾಹಿತಿ ಪಡೆಯಬಹುದು ಎಂದು ವಕೀಲ ಪಿ. ವಿ. ದಿನೇಶ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಮುಖ್ಯ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.

 ಘಟನೆ ಸಂಬಂಧ ತನಿಖೆಗಾಗಿ ವಿಶೇಷ ತಂಡವೊಂದು ರಚಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಸಾಕ್ಷ್ಯನಾಶ ಸಂಬಂಧ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಹಾಗೂ  ಹೆಡ್ ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಮುಸ್ಲಿಂ ಸಮುದಾಯದ ಬಾಲಕಿ ಜನವರಿ 10 ರಂದು ಮನೆಯಿಂದ ನಾಪತ್ತೆಯಾಗಿದ್ದಳು, ವಾರದ ಬಳಿಕ ಆದೇ ಸ್ಥಳದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮಾರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com