ಉತ್ತರ ಪ್ರದೇಶ: ಲೈಂಗಿಕ ಕಿರುಕುಳದಿಂದ ಬೇಸತ್ತ ದಲಿತ ಮಹಿಳೆ ಆತ್ಮಹತ್ಯೆಗೆ ಶರಣು

ಇಬ್ಬರು ಕಾಮುಕರು 38 ವರ್ಷದ ದಲಿತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇದರಿಂದ ಬೇಸತ್ತ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ಮುಜಾಫರ್ ನಗರ: ಇಬ್ಬರು ಕಾಮುಕರು 38 ವರ್ಷದ ದಲಿತ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದು, ಇದರಿಂದ ಬೇಸತ್ತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೋಲ್ಲಾ ಗ್ರಾಮದಲ್ಲಿ ನಡೆದಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಮಹಿಳೆ ಡೆತ್ ನೋಟ್ ಬರೆದಿಟ್ಟು ಬಳಿಕ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ಮಹಿಳೆ ತನಗೆ ಲೈಂಗಿಕ ಕಿರುಕುಳ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ ಎಂದು ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಸೆಹದೇವ್ ಅವರು ಹೇಳಿದ್ದಾರೆ.
ಮಹಿಳೆಯ ಮೃತದೇವಹನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ ಮತ್ತು ಪ್ರಕರಣ ತನಿಖೆ ಪ್ರಗತಿಯಲ್ಲಿದೆ ಎಂದು ಅವರು ತಿಳಿಸಿದ್ದಾರೆ.
ಮಹಿಳೆ ಡೆತ್ ನೋಟ್ ನಲ್ಲಿ ಆರೋಪಿಸಿದ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದೇವೆ ಮತ್ತು ಆ ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com