ಪ್ರಧಾನಿಗಳೇ, ನಿಮ್ಮ ಮೌನ ಸ್ವೀಕಾರಾರ್ಹವಲ್ಲ, ನಿಮ್ಮ ಮಾತಿಗಾಗಿ ದೇಶ ಕಾಯುತ್ತಿದೆ: ರಾಹುಲ್ ಗಾಂಧಿ

ಉತ್ತರಪ್ರದೇಶದ ಉನ್ನಾವೋ ಹಾಗೂ ಕಾಶ್ಮೀರದ ಕಠುವಾದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೌನ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಕಿಡಿಕಾರಿದ್ದಾರೆ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ; ಉತ್ತರಪ್ರದೇಶದ ಉನ್ನಾವೋ ಹಾಗೂ ಕಾಶ್ಮೀರದ ಕಠುವಾದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ ಸಂಬಂಧ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಮೌನ ಕುರಿತಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಕಿಡಿಕಾರಿದ್ದಾರೆ. 
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪ್ರಧಾನಮಂತ್ರಿಗಳೇ ನಿಮ್ಮ ಮೌನ ಸ್ವೀಕಾರಾರ್ಹವಲ್ಲ. ಮಹಿಳೆಯರು ಮತ್ತು ಮಕ್ಕಳ ಮೇಲೆ ಹೆಚ್ಚಿತ್ತಿರುವ ಹಿಂಸಾಚಾರ, ದೌರ್ಜನ್ಯಗಳ ಬಗ್ಗೆ ನೀವು ಏನು ಯೋಚಿಸುತ್ತಿದ್ದೀರಿ?... ಆರೋಪಿಗಳು ಹಾಗೂ ಅತ್ಯಾಚಾರಿಗಳನ್ನು ರಾಜ್ಯ ಸರ್ಕಾರಗಳೇಕೆ ರಕ್ಷಣೆ ಮಾಡುತ್ತಿದೆ?... ಉತ್ತರ ಕೊಡಿ, ಭಾರತ ನಿಮ್ಮ ಪ್ರತಿಕ್ರಿಯೆಗಾಗಿ ಕಾಯುತ್ತಿದೆ ಎಂದು ಪ್ರಶ್ನಿಸಿದ್ದಾರೆ.
ಉನ್ನಾವೋ ಹಾಗೂ ಕಠುವಾದಲ್ಲಿ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ದೇಶದಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗತೊಡಗಿವೆ. ಈ ನಡುವೆ ನಿನ್ನೆ ಮಧ್ಯರಾತ್ರಿ ಅತ್ಯಾಚಾರ ಪ್ರಕರಣಗಳಿಗೆ ವಿರೋಧ ವ್ಯಕ್ತಪಡಿಸಿದ್ದ ಕಾಂಗ್ರೆಸ್, ಕ್ಯಾಂಡಲ್ ಲೈಟ್ ಮಾರ್ಚ್ ನಡೆಸಿತ್ತು. ಪ್ರತಿಭಟನೆಗೆ ನೂರಾರು ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com