ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾಗದು: ಯೋಗಿ ಆದಿತ್ಯನಾಥ್

ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಮ್ಮ ಸರ್ಕಾರ ಅಪರಾಧ ಮತ್ತು ಅಪರಾಧಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ...
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ಲಕ್ನೋ: ಉನ್ನಾವೋ  ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಮ್ಮ ಸರ್ಕಾರ ಅಪರಾಧ ಮತ್ತು ಅಪರಾಧಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣವನ್ನು ಸಿಬಿಐ ಗೆ ಹಸ್ತಾಂತರಿಸಲಾಗಿದೆ,, ಸಿಬಿಐ ತನಿಖೆ ಆರಂಭಿಸಿದೆ. ಇನ್ನೊಂದೆಡೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸಿಂಗರ್ ವಿಚಾರಣೆ ನಡೆಸಲಾಗುತ್ತಿದೆ. ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ಸರ್ಕಾರ ಮತ್ತು ಆಡಳಿತ ಅಪರಾಧ ಮತ್ತು ಅಪರಾಧಿಗಳೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಪರಾಧಿ ಎಷ್ಟು ದೊಡ್ಡವರಾದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.
"ಪ್ರಕರಣದ ಮಾಹಿತಿ ದೊರೆತ ತಕ್ಷಣ, ಸರ್ಕಾರವು ತನಿಖೆಗಾಗಿ ಎಸ್ಐಟಿ ಅನ್ನು ರಚಿಸಿದೆ. ಅಪರಾಧ ಮತ್ತು ಭ್ರಷ್ಟಾಚಾರ ವಿಚಾರದಲ್ಲಿ ಯುಪಿಎ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯ ಮೇಲೆ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಅಪರಾಧಿಗಳು ಯಾವುದೇ ಸ್ಥಿತಿಯಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಯೋಗಿ ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಆರೋಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ಅವರನ್ನು ಸಿಬಿಐ ತಂಡ ಬಂಧಿಸಿದೆ. ಬೆಳಿಗ್ಗೆ 5 ಗಂಟೆಯಿಂದಲೂ ಏಳು ಜನರ ಸಿಬಿಐ ತಂಡ ಕುಲ್ದೀಪ್ ಅವರನ್ನು ವಿಚಾರಣೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com