ಮೊಹಾಲಿಯಲ್ಲಿ ಈ ಘಟನೆ ನಡೆಸಿದ್ದು ಪರ್ಮಿಶ್ ವರ್ಮಾ ಮನೆಗೆ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಬಂದು ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದರು. ಗುಂಡಿನ ದಾಳಿಯಲ್ಲಿ ಪರ್ಮಿಶ್ ಅವರ ಕಾಲಿಗೆ ಗುಂಡೇಟು ತಗುಲಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕುಲ್ ದೀಪ್ ಚಹಲ್ ಹೇಳಿದ್ದಾರೆ.