ಅಪ್ರಾಪ್ತರ ಮೇಲೆ ಅತ್ಯಾಚಾರ ಮಾಡಿದ ಅಪರಾಧಿಗಳಿಗೆ ಗಲ್ಲು ಶಿಕ್ಷೆಗೆ ಪ್ರಸ್ತಾವನೆ: ಮನೇಕಾ ಗಾಂಧಿ

ಈಗಿರುವ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದು 12 ವರ್ಷಗಳೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಜಾರಿಯಾಗುವಂತಹ ಪ್ರಸ್ತಾವನೆಯನ್ನು ಮಹಿಳಾ ಮತ್ತು ಮಕ್ಕಳ
ಮನೇಕಾ ಗಾಂಧಿ
ಮನೇಕಾ ಗಾಂಧಿ
ವಡೋದರ: ಈಗಿರುವ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತಂದು 12 ವರ್ಷಗಳೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರವೆಸಗಿದವರಿಗೆ ಗಲ್ಲು ಶಿಕ್ಷೆ ಜಾರಿಯಾಗುವಂತಹ ಪ್ರಸ್ತಾವನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ. 
ನನ್ನ ಇಲಾಖೆ ಪೋಸ್ಕೋ ಕಾಯ್ದೆಯ ಬದಲಾವಣೆಗೆ ಪ್ರಸ್ತಾವನೆ ಸಲ್ಲಿಸಲಿದ್ದು 12 ವರ್ಷದೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸಿದರಿಗೆ ಗಲ್ಲು ಶಿಕ್ಷೆ ವಿಧಿಸಲು ಶಿಫಾರಸ್ಸು ಮಾಡುತ್ತದೆ ಎಂದು ಮನೇಕಾ ಗಾಂಧಿ ತಿಳಿಸಿದ್ದಾರೆ. ಇದರಿಂದಾಗಿ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿದಂತಾಗುತ್ತದೆ ಎಂದು ಮನೇಕಾ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. 
ಕಥುವಾದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದು ಹತ್ಯೆಯಾಗಿರುವ ಪ್ರಕರಣ ದೇಶಾದ್ಯಂತ ಚರ್ಚೆಯಾಗುತ್ತಿದೆ. ಈ ಬೆನ್ನಲ್ಲೇ ಮನೇಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವುದರ ಬಗ್ಗೆ ಹೇಳಿಕೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com