ಜೈಪುರ: ಮೀಸಲಾತಿ ವ್ಯವಸ್ಥೆಯನ್ನು ಕೊನೆಯಾಗಲು ಅವಕಾಶ ನೀಡುವುದಿಲ್ಲ ಎಂದು ರಾಜಸ್ಥಾನ ಸಿಎಂ ವಸುಂಧರಾ ರಾಜೆ ಹೇಳಿದ್ದಾರೆ.
ಕೆಲವರು ಮೀಸಲಾತಿ ವ್ಯವಸ್ಥೆಯನ್ನು ಕೊನೆಗಾಣಿಸಲಾಗುತ್ತದೆ ಎಂದು ಸುಳ್ಳು ವದಂತಿಗಳನ್ನು ಹಬ್ಬಿಸುತ್ತಿದ್ದಾರೆ. ಆದರೆ ಅದಕ್ಕೆ ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ವಸುಂಧರಾ ರಾಜೆ ಭರವಸೆ ನೀಡಿದ್ದಾರೆ.
ಏ.14 ರಂದು ಬಿರ್ಲಾ ಆಡಿಟೋರಿಯಂ ನಲ್ಲಿ ಆಯೋಜಿಸಲಾಗಿದ್ದ ಅಂಬೇಡ್ಕರ್ ಜಯಂತಿ ಅಂಗವಾಗಿ ಮಾತನಾಡಿರುವ ಅವರು, ಬಾಬಾ ಸಾಹೇಬ್ ಅಂಬೇಡ್ಕರ್ ದೂರದೃಷ್ಟಿಯುಳ್ಳ ವ್ಯಕ್ತಿಯಾಗಿದ್ದರು. ಸಮಾಜದ ಎಲ್ಲಾ ವರ್ಗದವರನ್ನೂ ಒಗ್ಗೂಡಿಸಿ ಇತಿಹಾಸ ನಿರ್ಮಿಸಿದರು. ಅಷ್ಟೇ ಅಲ್ಲದೇ ಹಿಂದುಳಿದ ವರ್ಗಗಳನ್ನು ಮುನ್ನೆಲೆಗೆ ತರುವುದಕ್ಕಾಗಿ ಅಂಬೇಡ್ಕರ್ ಶ್ರಮಿಸಿದ್ದರು ಎಂದು ಹೇಳಿದ್ದಾರೆ.