ಆಂದ್ರಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು
ದೇಶ
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ದೊರಕಿಸಿಕೊಡಲು ಸಿಎಂ ಚಂದ್ರಬಾಬು ನಾಯ್ಡು ಉಪವಾಸ
ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ....
ವಿಜಯವಾಡ: ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರದಿಂದ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಲು ಎಲ್ಲಾ ಪ್ರಯತ್ನಗಳನ್ನು ಮಾಡಿದ್ದು ಇದೀಗ ತಮ್ಮ ಹುಟ್ಟುಹಬ್ಬದ ದಿನ ಉಪವಾಸ ಕೈಗೊಳ್ಳಲು ಆಂಧ್ರ ಪ್ರದೇಶ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ನಿರ್ಧರಿಸಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ನಿನ್ನೆ ಅಮರಾವತಿಯಲ್ಲಿ ಈ ವಿಷಯ ತಿಳಿಸಿದ ಅವರು, ವಿಭಜನೆ ನಂತರ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಆದರೆ ಎನ್ ಡಿಎ ಸರ್ಕಾರ ಆಂಧ್ರ ಪ್ರದೇಶಕ್ಕೆ ನ್ಯಾಯ ದೊರಕಿಸಿಕೊಡುವಲ್ಲಿ ವಿಫಲವಾಗಿದೆ. ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ನಾನು ದೀಕ್ಷೆ ಕೈಗೊಳ್ಳುತ್ತೇನೆ ಎಂದು ಹೇಳಿದರು.
ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದ ಬೈಬಲ್ ಮಿಷನ್ ಮೈದಾನದಲ್ಲಿ ಬೆಳಗ್ಗೆಯಿಂದ ಸಾಯಂಕಾಲದವರೆಗೆ ಉಪವಾಸ ಕೈಗೊಳ್ಳಲಿರುವ ಅವರು ಇಲ್ಲಿ ಟಿಡಿಪಿ ದಲಿತ ತೇಜಮ್ ತೆಲುಗು ದೇಶಂ ನ್ನು ಏಪ್ರಿಲ್ 20ರಂದು ನಡೆಸಲಿದೆ. ಉಪವಾಸ ಕೈಗೊಳ್ಳುವ ಸಂದರ್ಭದಲ್ಲಿ ತಮ್ಮ ದಿನನಿತ್ಯದ ಕಚೇರಿ ಕೆಲಸಗಳನ್ನು ಮುಖ್ಯಮಂತ್ರಿಗಳು ಎಂದಿನಂತೆ ನಡೆಸುತ್ತಾರೆ ಎಂದು ಟಿಡಿಪಿ ನಾಯಕರು ತಿಳಿಸಿದ್ದಾರೆ.

