ಅಪ್ರಾಪ್ತರ ಮೇಲಿನ ಅತ್ಯಾಚಾರ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ರಾಹುಲ್ ಒತ್ತಾಯ

ಕಥುವಾ ಮತ್ತು ಉನ್ನಾವೊ ಅತ್ಯಾಚಾರ ಪ್ರಕರಣಗಳಿಗೆ ದೇಶಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಕಥುವಾ ಮತ್ತು ಉನ್ನಾವೊ ಅತ್ಯಾಚಾರ ಪ್ರಕರಣಗಳಿಗೆ ದೇಶಾದ್ಯಂತ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ  ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದೇಶದಲ್ಲಿನ ಹೆಣ್ಣುಮಕ್ಕಳಿಗೆ  ನ್ಯಾಯ ಒದಗಿಸಲು ಪ್ರಧಾನಿ ನರೇಂದ್ರಮೋದಿ ಗಂಭೀರ ಮನಸ್ಥಿತಿ ಹೊಂದಿದ್ದರೆ  ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲಿನ  ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ  ವಿಚಾರಣೆ ನಡೆಸಿ ತಪಿತಸ್ಥರನ್ನು ಶಿಕ್ಷೆಗೆ ಗುರಿಪಡಿಸಬೇಕೆಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.

2016ರಲ್ಲಿ ದೇಶದಲ್ಲಿ 19, 675ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ನಡೆದಿರುವುದು ಅವಮಾನದ ಸಂಗತಿ ಎಂದು ರಾಹುಲ್ ಗಾಂಧಿ ಹೇಳಿದರು.

2016 ರಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ 19. 675 ಅತ್ಯಾಚಾರ  ಪ್ರಕರಣಗಳು ವರದಿಯಾಗಿವೆ. ಇದು ಅವಮಾನಕರವಾಗಿದ್ದು, ನಮ್ಮ ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರಮೋದಿ ತ್ವರಿತಗತಿಯಲ್ಲಿ  ಪ್ರಕರಣದ ವಿಚಾರಣೆ ನಡೆಸಬೇಕೆಂದು ಗಾಂಧಿ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

ಕಥುವಾ ಮತ್ತು ಉನ್ನಾವೊ ಪ್ರಕರಣಗಳ ಆರೋಪಿಗಳು ತಪ್ಪಿಸಿಕೊಳ್ಳಲು ಬಿಡುವುದಿಲ್ಲ. ಸಂತ್ರಸ್ತ ಬಾಲಕಿಯರಿಗೆ ನ್ಯಾಯ ಒದಗಿಸುವುದಾಗಿ ಪ್ರಧಾನಿ ನರೇಂದ್ರಮೋದಿ ಹೇಳಿದ ನಂತರ ರಾಹುಲ್ ಗಾಂಧಿ ಈ ರೀತಿಯ ಹೇಳಿಕೆ ನೀಡಿದ್ದಾರೆ.

ಕಥುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಬಳಿಕ ಹತ್ಯೆ ಮಾಡಲಾಗಿತ್ತು. ಉನ್ನಾವೊದಲ್ಲಿ ಬಿಜೆಪಿ ಶಾಸಕ 17 ವರ್ಷದ ಯುವತಿ ಮೇಲೆ ಆತ್ಯಾಚಾರವೆಸಗಿ ಜೈಲುಪಾಲಾಗಿದ್ದಾನೆ.


ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com