ಈ ವರ್ಷ ಸಾಮಾನ್ಯ ಮುಂಗಾರು: ಹವಾಮಾನ ಇಲಾಖೆ

ಈ ವರ್ಷ ದೇಶಾದ್ಯಂತ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಈ ವರ್ಷ ದೇಶಾದ್ಯಂತ ಸಾಮಾನ್ಯ ಮುಂಗಾರು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ಮುನ್ಸೂಚನೆ ನೀಡಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಕೆಜಿ ರಮೇಶ್ ಅವರು, ಈ ಬಾರಿ ದೀರ್ಘಾವಧಿಯಲ್ಲಿ ಶೇ. 97ರಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಜೂನ್ ನಿಂದ ಸೆಪ್ಟೆಂಬರ್‌ವರೆಗೆ ಸಾಧಾರಣ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ ಎಂದರು.
ನಾಲ್ಕು ತಿಂಗಳ ಅವಧಿಯಲ್ಲಿ ಕೆಲವೊಮ್ಮೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ರಮೇಶ್‌ ಮಾಹಿತಿ ನೀಡಿದ್ದಾರೆ.
ಮೇ ತಿಂಗಳ ಮಧ್ಯದಲ್ಲಿ ಕೇರಳಕ್ಕೆ ಮುಂಗಾರು ಪ್ರವೇಶಿಸುವ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ. 
ಕಳೆದ ವರ್ಷ ಕೂಡ ಸಾಧಾರಣ ಮುಂಗಾರು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿತ್ತು. ಅದರಂತೆ ಶೇಕಡ 95ರಷ್ಟು ಮಳೆಯಾಗಿತ್ತು. 
ಹವಾಮಾನ ಇಲಾಖೆಯ ಲೆಕ್ಕಾಚಾರದ ಅನ್ವಯ ಸಾಮಾನ್ಯ ಸರಾಸರಿಗಿಂತ ಶೇ.90ರಷ್ಟು ಕಡಿಮೆ ಮಳೆ ಬಿದ್ದರೆ ಅದನ್ನು ಮಳೆ ಕೊರತೆ ಎಂದು, ಶೇ.90-96ರ ಸರಾಸರಿಯಲ್ಲಿದ್ದರೆ ಅದನ್ನು ಸಾಮಾನ್ಯಕ್ಕಿಂತ ಕಡಿಮೆ ಎಂದು, ಶೇ.96-104ರ ಪ್ರಮಾಣದಲ್ಲಿದ್ದರೆ ಅದನ್ನು ಸಾಮಾನ್ಯ ಅಥವಾ ಹೆಚ್ಚಿನ ಮಳೆ ಎಂದು ಕರೆಯಲಾಗುತ್ತದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com