ನಮ್ಮ ಹೆಣ್ಮಕ್ಕಳೇ ಸುರಕ್ಷಿತವಾಗಿಲ್ಲ, ಪ್ರಧಾನಿಗೆ ವಿದೇಶ ಪ್ರವಾಸ ಬೇಕೇ: ತೊಗಾಡಿಯಾ ಟೀಕೆ

ದೇಶದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದಿರುವಾಗ ಪ್ರಧಾನಿ ನರೇಂದ್ರಮೋದಿ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆರೋಪಿಸಿದ್ದಾರೆ
ಪ್ರವೀಣ್ ತೊಗಾಡಿಯಾ
ಪ್ರವೀಣ್ ತೊಗಾಡಿಯಾ

ಗುಜರಾತ್ : ದೇಶದಲ್ಲಿ ಹೆಣ್ಣುಮಕ್ಕಳಿಗೆ ಸುರಕ್ಷತೆ ಇಲ್ಲದಿರುವಾಗ ಪ್ರಧಾನಿ ನರೇಂದ್ರಮೋದಿ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ ಮಾಜಿ ನಾಯಕ ಪ್ರವೀಣ್ ತೊಗಾಡಿಯಾ ಆರೋಪಿಸಿದ್ದು, ನಾಳೆಯಿಂದ ಉಪವಾಸ ಸತ್ಯಾಗ್ರಹ ಪ್ರಾರಂಭಿಸಲಿದ್ದಾರೆ.

ಗಡಿ ಪ್ರದೇಶಗಳಲ್ಲಿ ನಮ್ಮ ಸೈನಿಕರಿಗೆ ಸುರಕ್ಷತೆ ಇಲ್ಲ. ಹೆಣ್ಣು ಮಕ್ಕಳಿಗೆ ಮನೆಯಲ್ಲಿ ರಕ್ಷಣೆ ಇಲ್ಲದಂತಾಗಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಆದಾಗ್ಯೂ, ನಮ್ಮ ಪ್ರಧಾನಿ ವಿದೇಶಿ ಪ್ರವಾಸ ಕೈಗೊಳ್ಳುತ್ತಿದ್ದಾರೆ ಎಂದು ತೊಗಾಡಿಯಾ ಕಿಡಿಕಾರಿದ್ದಾರೆ.

ಪ್ರಧಾನಿ ನರೇಂದ್ರಮೋದಿ  ಸ್ವೀಡನ್ ಮತ್ತು ಇಂಗ್ಲೇಂಡ್ ಗೆ ಇಂದಿನಿಂದ ಐದು ದಿನ ಪ್ರವಾಸ ಕೈಗೊಂಡಿದ್ದಾರೆ. ಹಿಮಾಚಲ  ಪ್ರದೇಶದ ಮಾಜಿ ಗೌರ್ನರ್ ವಿ.ಎಸ್. ಕೊಕ್ಜಿ ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ನಂತರ ತೊಗಡಿಯಾ ಅವರನ್ನು ವಿಶ್ವ ಹಿಂದೂ ಪರಿಷತ್ತಿನಿಂದ ಗೇಟ್ ಪಾಸ್ ನೀಡಲಾಗಿದೆ.

 ವಿಶ್ವ ಹಿಂದೂ ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿದ್ದ ತೂಗಾಡಿಯಾ ತನ್ನ ಶಕ್ತಿ ಪ್ರದರ್ಶನಕ್ಕಾಗಿ  ಉಪವಾಸ ಸತ್ಯಾಗ್ರಹ ಕೂರುತ್ತಿದ್ದಾರೆ. ಮೋದಿ ಹಾಗೂ ತೊಗಾಡಿಯಾ ಇಬ್ಬರು ಗುಜರಾತ್ ಮೂಲದವರಾಗಿದ್ದು, ಆರ್ ಎಸ್ ಎಸ್ ಸ್ವಯಂ ಸೇವಕರಾಗಿ ಹಲವು ದಶಕಗಳಿಂದಲೂ ಜೊತೆಯಾಗಿ ಕಾರ್ಯನಿರ್ವಹಿಸಿದ್ದಾರೆ.





ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com