ಆಂಧ್ರಕ್ಕೆ ವಿಶೇಷ ಸ್ಥಾನಮಾನ: ರಾಷ್ಟ್ರಪತಿ ಮಧ್ಯಪ್ರವೇಶಕ್ಕೆ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮನವಿ

ಕೇಂದ್ರಸರ್ಕಾರ ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಮಾನ್ಯತೆ ನೀಡಿ ಅನುದಾನ ಬಿಡುಗಡೆ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶಿಸಬೇಂದು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ನಾಯಕರು ಮನವಿ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ವೈಎಸ್ ಆರ್   ಕಾಂಗ್ರೆಸ್ ಶಾಸಕರು
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಹಾಗೂ ವೈಎಸ್ ಆರ್ ಕಾಂಗ್ರೆಸ್ ಶಾಸಕರು

ನವದೆಹಲಿ: ಕೇಂದ್ರಸರ್ಕಾರ  ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ಮಾನ್ಯತೆ ನೀಡಿ ಅನುದಾನ ಬಿಡುಗಡೆ ಮಾಡಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಧ್ಯ ಪ್ರವೇಶಿಸಬೇಂದು ವೈಎಸ್ ಆರ್ ಕಾಂಗ್ರೆಸ್ ಪಕ್ಷದ  ನಾಯಕರು ಮನವಿ ಸಲ್ಲಿಸಿದ್ದಾರೆ.

ವೈಎಸ್ ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಈ ಪತ್ರ ಬರೆದಿದ್ದಾರೆ.
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಚಂದ್ರಾಬಾಬು ನಾಯ್ಡು ನೇತೃತ್ವದಲ್ಲಿ ಒಂದು ದಿನ ಉಪವಾಸ ಸತ್ಯಾಗ್ರಹ ನಡೆಸಲು ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.ವಿಜಯವಾಡದಲ್ಲಿ  ಏ.20 ರಂದು ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹ ನಡೆಸಲಿದ್ದಾರೆ.

2018-19ರ ಕೇಂದ್ರ ಬಜೆಟ್  ಮಂಡನೆ ನಂತರ ವಿಶೇಷ ಸ್ಥಾನಮಾನ ಮಾನ್ಯತೆಗಾಗಿ ಕೇಂದ್ರ ಹಾಗೂ ಆಂಧ್ರಪ್ರದೇಶ ರಾಜ್ಯ ಸರ್ಕಾರದ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇದೆ.

ಬಜೆಟ್ ನಲ್ಲಿ ವಿಶೇಷ ಸ್ಥಾನಮಾನದ ಮಾನ್ಯತೆಯನ್ನು ಕೇಂದ್ರಸರ್ಕಾರ ನಿರ್ಲಕ್ಷಿಸಿದೆ ಎಂದು ಟಿಡಿಪಿ ಆರೋಪ ಮಾಡಿದೆ.

ಆಡಳಿತಾರೂಢ ಟಿಡಿಪಿ ಪಕ್ಷ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೊಟದಿಂದ ಹೊರ ಬಂದ ನಂತರ ಈ ವಿಚಾರ ಮತ್ತಷ್ಟು ತೀವ್ರತೆ  ಪಡೆದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com