ಸುಪ್ರೀಂ ಕೋರ್ಟ್
ದೇಶ
ಎಸ್ಸಿ/ಎಸ್ಟಿ ಕಾಯ್ದೆ ತೀರ್ಪು: ಛತ್ತೀಸ್ ಗಢದಿಂದ ಸುಪ್ರೀಂಗೆ ಮರು ಪರಿಶೀಲನೆ ಅರ್ಜಿ
ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಕೆಲವು ನಿಯಮಗಳನ್ನು ಬದಲಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ...
ಛತ್ತೀಸ್ ಗಢ: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಕೆಲವು ನಿಯಮಗಳನ್ನು ಬದಲಿಸಿ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಛತ್ತೀಸ್ ಗಢ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಲಿದೆ ಎಂದು ಛತ್ತೀಸ್ ಗಢ ಮುಖ್ಯಮಂತ್ರಿ ರಮಣ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶ ಜಾರಿ ಸಂಬಂಧ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನು ಸಹ ಹಿಂಪಡೆಯುವುದಾಗಿ ರಮಣ್ ಸಿಂಗ್ ಅವರು ತಿಳಿಸಿದ್ದಾರೆ.
ಕಳೆದ ಮಾರ್ಚ್ 20ರಂದು ಸರ್ವೋಚ್ಚ ನ್ಯಾಯಾಲಯ ಪ್ರಾಮಾಣಿಕ ಸರ್ಕಾರಿ ಅಧಿಕಾರಿಗಳಿಗೆ ತಮ್ಮ ಕರ್ತವ್ಯಗಳನ್ನು ನಿರ್ಭಯದಿಂದ ನಿರ್ವಹಿಸಲು ಮತ್ತು ಬ್ಲಾಕ್ ಮೇಲ್‌ಗೆ ಗುರಿಯಾಗುವುದನ್ನು ತಪ್ಪಿಸಲು ಎಸ್‌ಸಿ/ಎಸ್‌ಟಿ ಕಾಯಿದೆಯ ಕಾಠಿನ್ಯವನ್ನು ಕಡಿಮೆ ಮಾಡುವ ಆದೇಶವನ್ನು ಪ್ರಕಟಿಸಿತ್ತು.
ಸುಪ್ರೀಂ ಆದೇಶದ ವಿರುದ್ಧ ಏಪ್ರಿಲ್ 2ರಂದು ದಲಿತ ಸಂಘಟನೆಗಳು ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವು. ದಲಿತರ ಹಕ್ಕುಗಳನ್ನು ರಕ್ಷಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ