ಜಮ್ಮು-ಕಾಶ್ಮೀರ: ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರ ದಾಳಿ, ಓರ್ವ ನಾಗರೀಕ, ಓರ್ವ ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಓರ್ವ ನಾಗರೀಕ ಹಾಗೂ ಓರ್ವ ಯೋಧ ಗಾಯಗೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ದಾಳಿ ನಡೆಸಿದ್ದು, ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಓರ್ವ ನಾಗರೀಕ ಹಾಗೂ ಓರ್ವ ಯೋಧ ಗಾಯಗೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಸೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಯೋಧ ಹಾಗೂ ನಾಗರೀಕರೋರ್ವರು ಗಾಯಗೊಂಡಿದ್ದಾರೆ. ನಾಗರೀಕ ರಫೀಕ್ ಹಾಗೂ ಯೋಧ ಬಿಲಾಲ್ ಅಹ್ಮದ್ ಎಂಬುವವರು ಗಾಯಗೊಂಡಿದ್ದಾರೆಂದು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ವಕ್ತಾರರು ಹೇಳಿದ್ದಾರೆ. 
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. 
ಪ್ರಸ್ತುತ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಉಗ್ರರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು ದಾಳಿ ನಡೆಸಿದ್ದಾರೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com