ಜಮ್ಮು-ಕಾಶ್ಮೀರ; ಪೊಲೀಸ್ ಠಾಣೆಗೇ ನುಗ್ಗಿ ಗುಂಡಿನ ದಾಳಿ ನಡೆಸಿದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಶೋಪಿಯಾನ್ ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶೋಪಿಯಾನ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದು, ಶೋಪಿಯಾನ್ ಜಿಲ್ಲೆಯಲ್ಲಿನ ಪೊಲೀಸ್ ಠಾಣೆಗೆ ನುಗ್ಗಿ ಗುಂಡಿನ ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.
ಇಂದು ಬೆಳಿಗ್ಗೆ ಪೊಲೀಸ್ ಠಾಣೆ ನುಗ್ಗಿರುವ ಉಗ್ರರು, ಹಲವು ಸುತ್ತಿನ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. 
ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಮಿಸಿರುವ ಸೇನಾ ಪಡೆ ಉಗ್ರರಿಗಾಗಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com