
ಚೆನ್ನೈ : ಮಧುರೈನ ಕಾಮರಾಜ ವಿಶ್ವವಿದ್ಯಾಲಯದ ಲೈಂಗಿಕ ಹಗರಣಕ್ಕೆ ಸಂಬಂಧ ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಕೇಂದ್ರಸರ್ಕಾರ ವಾಪಾಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಇಲ್ಲಿನ ಸೈದಾಪೇಟೆಯಲ್ಲಿರುವ ರಾಜಭವನ ಮುಂದೆ ಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸೈದಾಪೇಟೆಯಿಂದ ರಾಜಭವನದವರೆವಿಗೂ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಚಿನ್ನಮಲೈನ ನ್ಯಾಯಾಲಯದ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಡಿಎಂಕೆ ಶಾಸಕ ಮಾ. ಸುಬ್ರಮಣಿಯನ್, ಸಂವಿಧಾನದ ತತ್ವಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದು, ಕೂಡಲೇ ಅವರನ್ನು ಕೇಂದ್ರಸರ್ಕಾರ ವಾಪಾಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿದರು.
ರಾಜ್ಯಪಾಲರ ಮೇಲೆಯೇ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರೇ ತನಿಖೆಗೆ ಆದೇಶಿಸುವುದು ಸೂಕ್ತವಲ್ಲಾ, ಅವರನ್ನು ತಮಿಳುನಾಡಿನಿಂದ ಹಿಂದಕ್ಕೆ ಕರೆಸಿಕೊಳ್ಳುವಂತೆ ಒತ್ತಾಯಿಸಿದರು.
ಮಧುರೈ ಕಾಮರಾಜ್ ವಿಶ್ವವಿದ್ಯಾಲಯ ದ ಉನ್ನತ ಅಧಿಕಾರಿಗಳ ಜತೆ ಹಾಸಿಗೆ ಹಂಚಿಕೊಂಡಲ್ಲಿ, ಅಂಥ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಸವಲತ್ತು ನೀಡುವುದಾಗಿ ಮಹಿಳಾ ಪ್ರೊಫೆಸರ್‌ವೊಬ್ಬರು ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
Advertisement