48 ಸಂಸದರು, ಶಾಸಕರ ಮೇಲಿವೆ ಮಹಿಳಾ ದೌರ್ಜನ್ಯದ ಕೇಸ್‌; ಬಿಜೆಪಿಗೆ ಮೊದಲ ಸ್ಥಾನ!

ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಶಾಸಕ ಆರೋಪಿಯಾಗಿರುವ ಉನ್ನಾವೊ ಅತ್ಯಾಚಾರ ಪ್ರಕರಣ ಸೇರಿದಂತೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 
ನವದೆಹಲಿ: ಉತ್ತರ ಪ್ರದೇಶದಲ್ಲಿ ಆಡಳಿತರೂಢ ಬಿಜೆಪಿ ಶಾಸಕ ಆರೋಪಿಯಾಗಿರುವ ಉನ್ನಾವೊ ಅತ್ಯಾಚಾರ ಪ್ರಕರಣ ಸೇರಿದಂತೆ ದೇಶಾದ್ಯಂತ ಅತ್ಯಾಚಾರ ಮತ್ತು ಮಹಿಳಾ ದೌರ್ಜನ್ಯದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದೇ ವೇಳೆ 48 ಸಂಸದರು ಮತ್ತು ಶಾಸಕರು ವಿರುದ್ಧ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣಗಳು ದಾಖಲಾಗಿರುವುದು ಬಹಿರಂಗವಾಗಿದೆ.
ದೇಶದ ಒಟ್ಟು 1,580 ಸಂಸದು ಮತ್ತು ಶಾಸಸಕರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಪೈಕಿ 48 ಸಂಸದರು ಮತ್ತು ಶಾಸಕರ ವಿರುದ್ಧ ಮಹಿಳಾ ದೌರ್ಜನ್ಯ ಕೇಸ್ ದಾಖಲಾಗಿವೆ. ಇದರಲ್ಲಿ ಬಿಜೆಪಿ ಶಾಸಕರು, ಸಂಸದರ ಸಂಖ್ಯೆಯೇ ಅತಿ ಹೆಚ್ಚಾಗಿದೆ ಎಂದು ಅಸೋಸಿಯೇಷನ್‌ ಫಾರ್‌ ಡೆಮಾಕ್ರಾಟಿಕ್‌ ರಿಫಾರ್ಮ್ಸ್‌(ಎಡಿಆರ್) ಅಧ್ಯಯನ ವರದಿ ಬಹಿರಂಗಪಡಿಸಿದೆ.
ಬಿಜೆಪಿಯ 12 ಶಾಸಕರು, ಸಂಸದರು, ಶಿವಸೇನೆಯ 7 ಹಾಗೂ ತೃಣಮೂಲ ಕಾಂಗ್ರೆಸ್ ನ 6 ಶಾಸಕರು ಮತ್ತು ಸಂಸದರ ವಿರುದ್ಧ ಮಹಿಳಾ ದೌರ್ಜನ್ಯದ ಕೇಸ್ ದಾಖಲಾಗಿವೆ.
ಪ್ರಮುಖ ರಾಜಕೀಯ ಪಕ್ಷಗಳು ಕಳೆದ 5 ವರ್ಷಗಳಲ್ಲಿ ಮಹಿಳಾ ದೌರ್ಜನ್ಯ ಪ್ರಕರಣ ಎದುರಿಸುತ್ತಿರುವ 327 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿದ್ದು, 118 ಮಂದಿ ಪಕ್ಷೇತರವಾಗಿ ಕಣಕ್ಕಿಳಿದಿದ್ದಾರೆ ಎಂದು ವರದಿ ಹೇಳಿದೆ.
ರಾಜ್ಯ ಸಭೆ ಮತ್ತು ಲೋಕಸಭೆಗೂ 40 ಮಂದಿ ಇಂತಹ ಕೇಸ್‌ ಹೊಂದಿದ್ದವರಿಗೆ ಟಿಕೆಟ್‌ಗಳನ್ನು ನೀಡಲಾಗಿದೆ. ವಿಧಾನಸಭಾ ಚುನಾವಣೆಗೆ ವಿವಿಧ ಪಕ್ಷಗಳು ಕೇಸ್‌ ಹೊಂದಿದ್ದ 287 ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿವೆ ಎಂದು ವರದಿ ತಿಳಿಸಿದೆ.
ಬಿಜೆಪಿ ಮಹಿಳಾ ದೌರ್ಜನ್ಯ ಕೇಸ್‌ ಎದುರಿಸುತ್ತಿರುವ 47 ಮಂದಿಗೆ ಟಿಕೆಟ್‌ ನೀಡಿದ್ದು, ಬಿಎಸ್‌ಪಿ 35 ಮಂದಿಗೆ ಟಿಕೆಟ್‌ ನೀಡಿದ್ದು, ಕಾಂಗ್ರೆಸ್‌ 24 ಮಂದಿಗೆ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com