ನ್ಯಾಯಾಧೀಶ ಲೋಯಾ ಸಾವು: ಎಸ್ಐಟಿ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾಗಿದ್ದ ಬಿಎಚ್ ಲೋಯಾ ನಿಗೂಢ ಸಾವಿನ ಪ್ರಕರಣವನ್ನ ವಿಶೇಷ ತನಿಖಾ ತಂಡ...
ನ್ಯಾಯಮೂರ್ತಿ ಲೋಯಾ
ನ್ಯಾಯಮೂರ್ತಿ ಲೋಯಾ
ನವದೆಹಲಿ: ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾಗಿದ್ದ ಬಿಎಚ್ ಲೋಯಾ ನಿಗೂಢ ಸಾವಿನ ಪ್ರಕರಣವನ್ನ ವಿಶೇಷ ತನಿಖಾ ತಂಡ(ಎಸ್ಐಟಿ) ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. 
ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳಿಗೆ ಯಾವುದೇ ಅರ್ಹತೆಯಿಲ್ಲ ಮತ್ತು ಪ್ರಕರಣ ಸಂಬಂಧ ವಿಚಾರಣೆ ನಡೆಸಿರುವ ನ್ಯಾಯಾಧೀಶರ ಹೇಳಿಕೆಗಳನ್ನು ಅನುಮಾನಿಸಲು ಯಾವುದೇ ಕಾರಣವಿಲ್ಲ. ಜತೆಗೆ ಅರ್ಜಿದಾರರು ನ್ಯಾಯಾಂಗವನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಸುಪ್ರೀಂಕೋರ್ಟ್ ಹೇಳಿದೆ. 
ಸುಪ್ರೀಂಕೋರ್ಟ್ ಈ ಪ್ರಕರಣದ ತೀರ್ಪನ್ನು ಮಾರ್ಚ್ 16ಕ್ಕೆ ಕಾಯ್ದಿರಿಸಿತ್ತು. ಈ ವೇಳೆ ಮಹಾರಾಷ್ಟ್ರ ಮೂಲದ ಪತ್ರಕರ್ತ ಬಿಎಸ್ ಲೋನೆ ಮತ್ತು ಸಾಮಾಜಿಕ ಕಾರ್ಯಕರ್ತ ತೆನ್ಸೆನ್ ಪೂನವಾಲ ಸ್ವತಂತ್ರವಾಗಿ ಅರ್ಜಿ ಸಲ್ಲಿಸಿದ್ದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಹಲವು ಪೊಲೀಸ್ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿದ್ದು ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದರು. 
ಸೊಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದ ಸಿಬಿಐ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾಗಿದ್ದ ಬಿಎಚ್ ಲೋಯಾ ಅವರು 2014ರಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು ಎಂದು ವರದಿಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com