ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ 68ನೇ ವರ್ಷದ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಹೇಳಿದ್ದಾರೆ.
ತೆಲುಗು ದೇಶಂ ಪಕ್ಷ(ಟಿಡಿಪಿ) ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟರ್ ನಲ್ಲಿ ಶುಭಾಶಯ ಕೋರಿದ್ದು ನಾನು ನಿಮ್ಮ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ ಎಂದು ಬರೆದಿದ್ದಾರೆ.
ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಿಲ್ಲ ಎಂಬ ಕಾರಣಕ್ಕೆ ಚಂದ್ರಬಾಬು ನಾಯ್ಡು ಅವರು ಬಿಜೆಪಿಯೊಂದಿಗೆ ಮೈತ್ರಿಯನ್ನು ಮುರಿದುಕೊಂಡಿದ್ದರು.
ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟದಲ್ಲಿದ್ದ ಇಬ್ಬರು ಟಿಡಿಪಿ ಸಂಸದರು ತಮ್ಮ ಸ್ಥಾನಕ್ಕೆ ಮಾರ್ಚ್ 8ರಂದು ರಾಜಿನಾಮೆ ನೀಡಿದ್ದರು.
Birthday wishes to Andhra Pradesh CM N Chandrababu Naidu Garu. I pray for his long and healthy life. @ncbn