ಕೆವೈಸಿ ನಿಯಮದಡಿ ಬ್ಯಾಂಕ್‌ ಖಾತೆಗೆ ಆಧಾರ್‌ ಕಡ್ಡಾಯ: ಆರ್ ಬಿಐ ಹೊಸ ಮಾರ್ಗಸೂಚಿ

ಕೆವೈಸಿ(ನಿಮ್ಮ ಗ್ರಾಹಕರನ್ನು ತಿಳಿಯಿರಿ) ನಿಯಮದಡಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ಕೆವೈಸಿ(ನಿಮ್ಮ ಗ್ರಾಹಕರನ್ನು ತಿಳಿಯಿರಿ) ನಿಯಮದಡಿ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಹೇಳಿದೆ.
ನಿನ್ನೆ ತಡರಾತ್ರಿ ಆರ್ ಬಿಐ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ,  ಆಧಾರ್ ಕಡ್ಡಾಯ ಸುಪ್ರೀಂ ಕೋರ್ಟ್ ಅಂತಿಮ ನಿರ್ಧಾರಕ್ಕೆ ಒಳಪಟ್ಟಿದ್ದು, ಕೋರ್ಟ್ ಅಂತಿಮ ನಿರ್ಧಾರ ಬರುವವರೆಗೂ, ಈ ಮಾರ್ಗದರ್ಶಿ ಮಾತ್ರ ಅನುಸರಿಸಬೇಕಿದೆ ಎಂದು ಸ್ಪಷ್ಟಪಡಿಸಿದೆ.
ಈವರೆಗಿನ ಆರ್ ಬಿಐನ ಕೆವೈಸಿ ನಿಯಮಗಳ ಪ್ರಕಾರ ಗ್ರಾಹಕರು ತಮ್ಮ ಬ್ಯಾಂಕ್‌ ಖಾತೆಗೆ ಐಟಿ ಇಲಾಖೆ ಕೊಟ್ಟಿರುವ  ಪ್ಯಾನ್‌ ನಂಬರ್‌ ಮತ್ತು ಈಚಿನ ಪಾಸ್‌ಪೋರ್ಟ್‌ ಗಾತ್ರದ ಫೋಟೋ ಸಲ್ಲಿಸುವುದು ಅಗತ್ಯವಾಗಿದೆ. ಆದರೆ ಆರ್‌ಬಿಐ ತಿದ್ದುಪಡಿ ಮಾಡಿರುವ ತನ್ನ ಕೆವೈಸಿ ನಿಯಮಗಳ ಪ್ರಕಾರ ಬ್ಯಾಂಕ್‌ ಖಾತೆಗೆ ಆಧಾರ್‌ ನಂಬರ್‌ ಜೋಡಣೆಯನ್ನು ಕಡ್ಡಾಯ ಮಾಡಿದೆ. 
ಈ ಮಾರ್ಗದರ್ಶಿ ಎಲ್ಲಾ ಬ್ಯಾಂಕ್ ಗಳು ಮತ್ತು ಇತರ ಕಂಪನಿಗಳಿಗೆ ಅನ್ವಯಿಸುತ್ತದೆ ಎಂದು ರಿಸರ್ವ್ ಬ್ಯಾಂಕ್ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com