ಕತುವಾ ಪ್ರಕರಣ; ವೈದ್ಯಕೀಯ ಪರೀಕ್ಷೆಯಿಂದ ಅತ್ಯಾಚಾರ ಸಾಬೀತು: ಕಾಶ್ಮೀರ ಪೊಲೀಸರು

ವೈದ್ಯಕೀಯ ಪರೀಕ್ಷೆಯಿಂದ ಕತುವಾ ಬಾಲಕಿಯ ಮೇಲಿನ ಸಾಬೀತಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಶ್ರೀನಗರ: ವೈದ್ಯಕೀಯ ಪರೀಕ್ಷೆಯಿಂದ ಕತುವಾ ಬಾಲಕಿಯ ಮೇಲಿನ ಸಾಬೀತಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಅಪರಾಧ ವಿಭಾಗದ ಪೊಲೀಸರು ಶನಿವಾರ ಸ್ಪಷ್ಟಪಡಿಸಿದ್ದಾರೆ.
ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ 8 ವರ್ಷದ ಬಾಲಕಿಯ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಕೆಲ ಮಾಧ್ಯಮಗಳು ಪ್ರಕಟಿಸಿದ ವರದಿ ಸುಳ್ಳು ಎಂದಿರುವ ಪೊಲೀಸರು, ಬಾಲಕಿಗೆ ನಿದ್ರೆ ಮಾತ್ರೆ ನೀಡಿ ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆಯೆಂಬುದು ವೈದ್ಯಕೀಯ ವರದಿಯಿಂದ ಸಾಬೀತಾದಂತಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಕೆಲ ದಿನ ಪತ್ರಿಕೆಗಳು, ಸುದ್ದಿ ವಾಹಿನಿಗಳು ಬಾಲಕಿ ಮೇಲೆ ಅತ್ಯಾಚಾರ ನಡೆದಿಲ್ಲ ಎಂದು ವರದಿ ಪ್ರಕಟಿಸಿದ್ದವು. ಈ ವರದಿಗಳು ಸಾಮಾಜಿಕ ಮಾಧ್ಯಮದಲ್ಲೂ ಶೇರ್ ಆಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಇಂದು ಪ್ರಕಟಣೆ ನೀಡುವ ಮೂಲಕ ಮಾಧ್ಯಮ ವರದಿ ಸುಳ್ಳು ಎಂದು ಹೇಳಿದ್ದಾರೆ.
ವೈದ್ಯಕೀಯ ವರದಿ ಆಧರಿಸಿ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 378 ಡಿ ಅಡಿ ಕೇಸ್ ದಾಖಲಿಸಲಾಗಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com