ಕೆಲವೇ ತಿಂಗಳ ಹಿಂದೆ ಸ್ಥಾಪನೆಯಾಗಿರುವ ರಾಷ್ಟ್ರ ಮಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿರುವ ಯಶ್ವಂತ್ ಸಿನ್ಹಾ, ಬಿಜೆಪಿಯೊಂದಿಗಿನ ದೀರ್ಘಕಾಲದ ಪಯಣವನ್ನು ಮುಕ್ತಾಯಗೊಳಿಸುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆಯೂ ಮಾಹಿತಿ ನೀಡಿರುವ ಯಶ್ವಂತ್ ಸಿನ್ಹಾ, ಇನ್ನು ಮುಂದಿನ ದಿನಗಳಲ್ಲಿ ಬಿಜೆಪಿಯೇತರ ಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡುವುದಾಗಿ ಹೇಳಿದ್ದಾರೆ.