ತ್ರಿಪುರ: ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಹಿರಿಯ ವ್ಯಕ್ತಿ ಬಂಧನ

ತ್ರಿಪುರದ ಖೊವೈ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಅಗರ್ತಾಲ: ತ್ರಿಪುರದ ಖೊವೈ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಮೂರು ತಿಂಗಳ ಕಾಲ ನಿರಂತರ ಅತ್ಯಾಚಾರ ಎಸಗಿದ ಆರೋಪದ ಮೇಲೆ 58 ವರ್ಷದ ವ್ಯಕ್ತಿಯನ್ನು ಬಂಧಿಸಿರುವುದಾಗಿ ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಅಗರ್ತಾಲದಿಂದ 60 ಕಿ.ಮೀ. ದೂರದಲ್ಲಿರುವ ಚಂಪ್ಲೈಯಲ್ಲಿರುವ ತನ್ನ ನಿವಾಸದಲ್ಲಿ ಕಳೆದ ಫೆಬ್ರವರಿಯಿಂದ 14 ವರ್ಷದ ಬಾಲಕಿ ಮೇಲೆ ವೃದ್ಧ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ವ್ಯಕ್ತಿಯನ್ನು ನಿನ್ನೆ ಆತನ ಮನೆಯಲ್ಲಿಯೇ ಬಂಧಿಸಲಾಗಿದ್ದು, ತನ್ನ ಮೇಲೆ 11 ಬಾರಿ ಅತ್ಯಾಚಾರ ಎಸಗಿರುವುದಾಗಿ ಸಂತ್ರಸ್ಥ ಬಾಲಕಿ ಆರೋಪಿಸಿರುವುದಾಗಿ ಖೊವೈ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣೆಂದು ಚಕ್ರವರ್ತಿ ಅವರು ತಿಳಿಸಿದ್ದಾರೆ. 
ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com