ಜಮ್ಮು-ಕಾಶ್ಮೀರ: ಕಲ್ಲು ತೂರಾಟದ ವೇಳೆ ಸೇನೆ ಗುಂಡಿನ ದಾಳಿ- ಮೂವರಿಗೆ ಗಾಯ

ದಕ್ಷಿಣ ಕಾಶ್ಮೀದರ ಪುಲ್ವಾಮ ಜಿಲ್ಲೆಯಲ್ಲಿ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ದಕ್ಷಿಣ ಕಾಶ್ಮೀದರ ಪುಲ್ವಾಮ ಜಿಲ್ಲೆಯಲ್ಲಿ ಸ್ಥಳೀಯರು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಪ್ರತಿಭಟನಾಕಾರರನ್ನು ಚದುರಿಸಲು ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಗಾಯಗೊಂಡಿದ್ದಾರೆಂದು ಭಾನುವಾರ ತಿಳಿದುಬಂದಿದೆ. 
55 ರಾಷ್ಟ್ರೀಯ ರೈಫಲ್ಸ್ ಪಡೆ ಮೇಲೆ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಈ ವೇಳೆ ಗುಂಡಿನ ದಾಳಿ ನಡೆಸಲಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಕೊಡಿಸಲಾಗಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸ್ ವಕ್ತಾರರು ಮಾಹಿತಿ ನೀಡಿದ್ದಾರೆ. 
ಈ ನಡುವೆ ಕುಲ್ಗಾಂ ಜಿಲ್ಲೆಯಲ್ಲಿ ವಾಹನಗಳ ಪರಿಶೀಲನೆ ವೇಳೆ ಕಾರೊಂದರಲ್ಲಿ ಸ್ಫೋಟಕ ವಸ್ತುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. 
ಮಿರ್ ಬಜಾರ್ ಚೆಕ್ ಪೋಸ್ಟ್ ಬಳಿ ಬಂದ ಕಾರನ್ನು ತಪಾಸಣೆಗೊಳಪಡಿಸಲಾಗಿತ್ತು. ಈ ವೇಳೆ 9 ಎಂಎಂ ಪಿಸ್ತೂಲ್ 1, 1 ನಿಯತಕಾಲಿಕೆ, 2 ನಿಯತಕಾಲಿಕೆಯೊಂದಿಗೆ 1 ಎಕೆ 47 ದೊರಕಿದ್ದು, ವಾಹನವನ್ನು ವಶಕ್ಕೆ ಪಡೆದುಕೊಂಡು, ವಾಹನದ ಚಾಲಕನನ್ನು ವಿಚಾರಣೆಗೊಳಪಡಿಸಲಾಗಿದೆ ಎಂದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com