ಎಸ್'ಸಿಒ ಸಮ್ಮೇಳನದಲ್ಲಿ ಭಾರತ-ಪಾಕ್ ನಡುವೆ ದ್ವಿಪಕ್ಷೀಯ ಮಾತುಕತೆಯಿಲ್ಲ

ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ (ಎಸ್'ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವುದಿಲ್ಲ ಎಂದು ಉನ್ನತ ಮೂಲಗಳು ಭಾನುವಾರ ಮಾಹಿತಿ ನೀಡಿವೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಚೀನಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಒಕ್ಕೂಟ (ಎಸ್'ಸಿಒ) ಸಮ್ಮೇಳನದಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಕತೆಗಳು ನಡೆಯುವುದಿಲ್ಲ ಎಂದು ಉನ್ನತ ಮೂಲಗಳು ಭಾನುವಾರ ಮಾಹಿತಿ ನೀಡಿವೆ. 
ಎಸ್'ಸಿಒ ಸಮ್ಮೇಳನದಲ್ಲಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ಯಾವುದೇ ರೀತಿಯ ದ್ವಿಪಕ್ಷೀಯ ಮಾತುಗಳನ್ನೂ ನಡೆಯುವುದಿಲ್ಲ ಎಂದು ತಿಳಿದುಬಂದಿದೆ. 
ಜೂನ್ ತಿಂಗಳಿನಲ್ಲಿ ಚೀನಾದಲ್ಲಿ ಎಸ್'ಸಿಒ ಸಮ್ಮೇಳನ ನಡೆಯಲಿದ್ದು, ಈ ಹಿನ್ನಲೆಯಲ್ಲಿ ಏಪ್ರಿಲ್ 24 ರಂದು ಉನ್ನತಾಧಿಕಾರಿಗಳ ಮಟ್ಟದಲ್ಲಿ ಸಭೆ ನಡೆಯುತ್ತಿದೆ. ಹೀಗಾಗಿ ನಿನ್ನೆಯಷ್ಟೇ ಸುಷ್ಮಾ ಸ್ವರಾಜ್ ಅವರು ಚೀನಾಗೆ ತೆರಳಿದ್ದರು. ಏಪ್ರಿಲ್ 24 ರಂದು ಸೀತಾರಾಮನ್ ಅವರು ಕೂಡ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಸಮ್ಮೇಳನದಲ್ಲಿ ಪಾಕಿಸ್ತಾನದ ಅಧಿಕಾರಿಗಳು ಕೂಡ ಭಾಗಿಯಾಗಲಿದ್ದಾರೆ. 
ಈ ಹಿನ್ನಲೆಯಲ್ಲಿ ಸುಷ್ಮಾ ಸ್ವರಾಜ್ ಹಾಗೂ ನಿರ್ಮಲಾ ಸೀತಾರಾಮನ್ ಅವರು ಪಾಕಿಸ್ತಾನದ ಅಧಿಕಾರಿಗಳೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗುತ್ತಿತ್ತು. 
ಪಠಾಣ್ ಕೋಟ್ ವಾಯುನೆಲೆ ಹಾಗೂ ಜಮ್ಮು ಮತ್ತು ಕಾಶ್ಮೀರ ಉರಿ ಸೆಕ್ಟರ್ ಮೇಲೆ 2016ರಲ್ಲಿ ರು ದಾಳಿ ನಡೆಸಿದ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com