ಏ.27 ಕ್ಕೆ ಚೀನಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಏ.27 ರಂದು ಚೀನಾಗೆ ಭೇಟಿ ನೀಡಲಿದ್ದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ನರೇಂದ್ರ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್
ನರೇಂದ್ರ ಮೋದಿ-ಚೀನಾ ಅಧ್ಯಕ್ಷ ಕ್ಸಿ ಜಿನ್ ಪಿಂಗ್
ಬೀಜಿಂಗ್: ಪ್ರಧಾನಿ ನರೇಂದ್ರ ಮೋದಿ ಏ.27 ರಂದು ಚೀನಾಗೆ ಭೇಟಿ ನೀಡಲಿದ್ದು ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. 
ಚೀನಾ ಅಧ್ಯಕ್ಷರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಚೀನಾಗೆ ಭೇಟಿ ನೀಡುತ್ತಿದ್ದು, ಪ್ರಧಾನಿ ಮೋದಿ ಅವರೊಂದಿಗೆ ವಿದೇಶಾಂಗ ಸಚಿವಾಲಯ ಸಚಿವೆ ಸುಷ್ಮಾ ಸ್ವರಾಜ್ ಸಹ ಚೀನಾಗೆ ತೆರಳಲಿದ್ದಾರೆ. 
ಇದೇ ವೇಳೆ ಶಾಂಘೈ ಸಹಕಾರ ಸಂಘಟನೆಯ 8 ರಾಷ್ಟ್ರಗಳ ವಿದೇಶಾಂಗ ಸಚಿವರು ಭಾಗವಹಿಸುವ ಸಭೆಯ ಬಗ್ಗೆ ಸುಷ್ಮಾ ಸ್ವರಾಜ್ ಚೀನಾ ವಿದೇಶಾಂಗ ಸಚಿವರೊಂದಿಗೆ ಸಂಪರ್ಕದಲ್ಲಿದ್ದಾರೆ.  ಮೂಲಗಳ ಪ್ರಕಾರ ಶಾಂಘೈ ಸಹಕಾರ ರಾಷ್ಟ್ರಗಳ ಶೃಂಗಸಭೆಯ ಪಾರ್ಶ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ- ಕ್ಸೀ ಜಿನ್ಪಿಂಗ್ ಮಾತುಕತೆ ನಡೆಯಲಿದೆ  ಎಂದು ತಿಳಿದುಬಂದಿದೆ. 
ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಚೀನಾ ಅಧ್ಯಕ್ಷರೊಂದಿಗೆ ನಡೆಯುತ್ತಿರುವ ನಾಲ್ಕನೆಯ ದ್ವಿಪಕ್ಷೀಯ ಮಾತುಕತೆ ಇದಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com