12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಗೆ ಕೇಂದ್ರ ಸರ್ಕಾರ ನಿನ್ನೆಯಷ್ಟೇ ನಿರ್ಧಾರ ಕೈಗೊಂಡಿತ್ತು. ಅಲ್ಲದೆ, ಇತರೆ ಅತ್ಯಾಚಾರ ಪ್ರಕರಣಗಳ ದೋಷಿಗಳಿಗೂ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಶೀಘ್ರವೇ ಕಾನೂನು ಜಾರಿ ಉದ್ದೇಶದಿಂದ ಸುಗ್ರೀವಾಜ್ಞೆ ಹೊರಡಿಸುವುದಾಗಿ ತಿಳಿಸಿತ್ತು. ಇದೀಗ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಒಪ್ಪಿಗೆ ಸೂಚಿಸಿದ್ದಾರೆ.